ನಟ ದರ್ಶನ್ ಜೊತೆ ಧನ್ವೀರ್ ಗೌಡ ಆಪ್ತವಾಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕಾನೂನಿನ ಸಂಕಷ್ಟ ಎದುರಿಸುತ್ತಿರುವ ದರ್ಶನ್ಗೆ ಅವರು ಸಾಕಷ್ಟು ಸಹಾಯ ಮಾಡುತ್ತಿದ್ದಾರೆ. ಇತ್ತೀಚೆಗೆ ದರ್ಶನ್ ಅವರನ್ನು ಪೊಲೀಸರು ಬಂಧಿಸಲು ಬಂದಾಗ ಧನ್ವೀರ್ ಗೌಡ ಮಾತನಾಡಲು ಮುಂದಾಗಿದ್ದರು.
ಆಗ ಪೊಲೀಸರು ಖಡಕ್ ವಾರ್ನಿಂಗ್ ನೀಡಿದರು. ‘ನೀನು ದರ್ಶನ್ ಪ್ರಕರಣದಲ್ಲಿ ಹೆಚ್ಚು ತಲೆ ತೂರಿಸಬೇಡ. ಕಾನೂನು ಕ್ರಮ ಜರುಗಿಸಬೇಕಾಗುತ್ತದೆ’ ಎಂದು ಪೊಲೀಸರು ವಾರ್ನಿಂಗ್ ನೀಡಿದರು.
ಜಾಮೀನು ರದ್ದು ಸುಪ್ರೀಂ ಕೋರ್ಟ್ ಆದೇಶ ಬಂದಾಗ ದರ್ಶನ್ ಬೆಂಗಳೂರಿನಲ್ಲಿ ಇರಲಿಲ್ಲ. ಸತ್ಯಮಂಗಲದ ಅಂದೂರು ಬಳಿ ಜಾತ್ರೆಯಲ್ಲಿ ಭಾಗಿಯಾಗಿ ಫಾರ್ಮ್‌ಹೌಸ್‌ಗೆ ಕುದುರೆ ಖರೀದಿಸಲು ಅವರು ತೆರಳಿದ್ದರು. ಜಾತ್ರೆಯಲ್ಲಿ ಎರಡು ಕುದುರೆಗಳನ್ನು ಫೈನಲ್ ಮಾಡಿದ್ದರು. ಜಾತ್ರೆಯಲ್ಲಿರುವಾಗಲೇ ಸ್ನೇಹಿತ ಧನ್ವೀರ್ ದೂರವಾಣಿ ಕರೆ ಮಾಡಿ ಸುಪ್ರೀಂಕೋರ್ಟ್‌ನ ತೀರ್ಪಿನ ಬಗ್ಗೆ ಮಾಹಿತಿ ನೀಡಿದ್ದರು. ಬಳಿಕ ದರ್ಶನ್ ಅವರು ಬೆಂಗಳೂರಿಗೆ ಆಗಮಿಸಿದ್ದರು.
,ಯಾವುದೇ ಕಾರಣಕ್ಕೂ ಕೆರೆ ಅಂಗಳವನ್ನು ಖಾತೆ ಮಾಡಿಕೊಡುವುದಿಲ್ಲ: ಕೃಷ್ಣ ಬೈರೇಗೌಡ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


