ಗಗನಯಾನಿ ಶುಭಾಂಶು ಶುಕ್ಲಾ ಭಾರತಕ್ಕೆ ಮರಳಿದ್ದಾರೆ. ಆಕ್ಸಿಯಮ್ -4 ಕಾರ್ಯಾಚರಣೆಯ ಭಾಗವಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ(ಐಎಸ್‌ಎಸ್) ಐತಿಹಾಸಿಕ ಭೇಟಿ ನೀಡಿದ ನಂತರ ಗಗನಯಾತ್ರಿ ಶುಭಾಂಶು ಶುಕ್ಲಾ ಭಾರತಕ್ಕೆ ಮರಳಿದ್ದಾರೆ.
ಜುಲೈ 15 ರಂದು ಭೂಮಿಗೆ ಮರಳಿರುವ ಶುಕ್ಲಾ ಭಾನುವಾರ ಮುಂಜಾನೆ ದೆಹಲಿಗೆ ಬಂದಿಳಿದರು.
ಅವರನ್ನು ದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಹಾಗೂ ಅವರ ಪತ್ನಿ ಮತ್ತು ಮಗ ಸೇರಿದಂತೆ ಅವರ ಕುಟುಂಬ ಬರಮಾಡಿಕೊಂಡಿದೆ. ಇಂದು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ.
ಜೂನ್ 25 ರಂದು ಅಮೆರಿಕದ ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಹಾರಾಟ ನಡೆಸಿದ ನಾಸಾದ ಆಕ್ಸಿಯಮ್ -4 ಬಾಹ್ಯಾಕಾಶ ಕಾರ್ಯಾಚರಣೆಯ ಭಾಗವಾಗಿ ಶುಕ್ಲಾ ಇದ್ದರು. 41 ವರ್ಷಗಳಲ್ಲಿ ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
,ಕರ್ನಾಟಕದ 19 ಧೈರ್ಯಶಾಲಿ ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಸಂಪೂರ್ಣ ಪಟ್ಟಿ ಇಲ್ಲಿದೆ!
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


