ಬೆಂಗಳೂರು: ಅಭಿಮಾನ್ ಸ್ಟುಡಿಯೋ ಆವರಣದಲ್ಲಿ ನಾಳೆ (ಸೆ.18) ಇಡೀ ದಿನ ನಟ ಡಾ. ವಿಷ್ಣುವರ್ಧನ್ ಅವರ 75ನೇ ಹುಟ್ಟುಹಬ್ಬದ ಕಾರ್ಯಕ್ರಮ ನಡೆಸಲು ಅನುಮತಿ ನೀಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಬೇಕು ಎಂಬ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಡಾ. ವಿಷ್ಣುವರ್ಧನ್ ಪುಣ್ಯಭೂಮಿ ಟ್ರಸ್ಟ್ ಹಾಗೂ ವಿಎಸ್‌ಎಸ್ ವಿಷ್ಣು ಸೇನಾ ಸಂಘಟನೆ ಅಧ್ಯಕ್ಷ ತಿಮ್ಮರಾಜು ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್‌ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು. ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ಅಭಿಮಾನ್
ಸ್ಟುಡಿಯೋ ಹಾಗೂ ರಾಜ್ಯ ಸರ್ಕಾರದ ನಡುವಿನ ಮಾಲೀಕತ್ವ ವ್ಯಾಜ್ಯದಲ್ಲಿ ವಿಶೇಷ ಜಿಲ್ಲಾಧಿಕಾರಿಗಳಿಗೆ ಹಲವು ನಿರ್ದೇಶನಗಳನ್ನು ನೀಡಿ ಈಗಾಗಲೇ ನ್ಯಾಯಾಲಯ ಆದೇಶ ಹೊರಡಿಸಿದೆ. ಹಾಗಾಗಿ, ಪುನಃ ಬೇರೆ ರೀತಿಯ ಆದೇಶ ನೀಡಲು ಸಾಧ್ಯವಿಲ್ಲ. ಆದ್ದರಿಂದ ಜನ್ಮದಿನಾಚರಣೆಗೆ ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂಬ ಅರ್ಜಿದಾರರ ಮಧ್ಯಂತರ ಮನವಿ ತಿರಸ್ಕರಿಸಲಾಗುತ್ತಿದೆ ಎಂದಿತು.
ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಜಿಲ್ಲಾಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ, ತಹಸೀಲ್ದಾರ್, ಡಾ. ವಿಷ್ಣುವರ್ಧನ್ ಪ್ರತಿಷ್ಠಾನದ ಸದಸ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿ ನ.4ಕ್ಕೆ ವಿಚಾರಣೆ ಮುಂದೂಡಿತು.
ಪ್ರಧಾನಿ ಮೋದಿ 75ನೇ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಡೊನಾಲ್ಡ್ ಟ್ರಂಪ್
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


