ಬೆಂಗಳೂರು: ಸದ್ಯ ಭಾರತದಾದ್ಯಂತ ಕಾಂತಾರ ಚಾಪ್ಟರ್ 1 ಚಿತ್ರದ ಮೂಲಕ ಮತ್ತೊಮ್ಮೆ ಸದ್ದು ಮಾಡುತ್ತಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ ಮಾಜಿ ಪ್ರಧಾನ ಮಂತ್ರಿ ಎಚ್. ಡಿ ದೇವೇಗೌಡ ಅವರನ್ನು ಭೇಟಿಯಾಗಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ರಿಷಬ್ ಶೆಟ್ಟಿ ʼಇದು ಬರೀ ಭೇಟಿಯಲ್ಲ, ನಮ್ಮ ನಾಡಿನ ಹಿರಿಯ ಚೇತನದೊಂದಿಗಿನ ಒಂದು ಸುಂದರ ಸಂವಾದ. ನಾಡಿನ ಅತ್ಯುನ್ನತ ಸ್ಥಾನಕ್ಕೆ ಏರಿ, ಕನ್ನಡಿಗರ ಕೀರ್ತಿಯನ್ನು ಹೆಚ್ಚಿಸಿದ ಮಾಜಿ ಪ್ರಧಾನಿ ಶ್ರೀ ಹೆಚ್. ಡಿ. ದೇವೇಗೌಡರ ಆಶೀರ್ವಾದ ಪಡೆದ ಕ್ಷಣಗಳು. ಅವರ ಅನುಭವದ ಮಾತುಗಳು ಮತ್ತು ಪ್ರೀತಿಯ ತಲೆದಡವು, ನನಗೆ ಮತ್ತಷ್ಟು ಶಕ್ತಿ ತುಂಬಿದೆ. ಈ ಪ್ರೀತಿ, ಆಶೀರ್ವಾದ ಸದಾ ಇರಲಿʼ ಎಂದು ಬರೆದುಕೊಂಡು ಕೊಂಡಾಡಿದ್ದಾರೆ.
ಇನ್ನು ಇತ್ತೀಚೆಗಷ್ಟೆ ಎಚ್. ಡಿ ದೇವೇಗೌಡ ಅನಾರೋಗ್ಯಕ್ಕೊಳಗಾಗಿದ್ದ ದೇವೇಗೌಡ ಸದ್ಯ ಆಸ್ಪತ್ರೆಯಿಂದ ಬಿಡುಗಡೆಯಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಈ ಸಲುವಾಗಿ ದೇವೇಗೌಡರನ್ನು ರಾಜಕೀಯ ಹಾಗೂ ಸಿನಿಮಾ ಮಂದಿ ಖುದ್ದು ಭೇಟಿಯಾಗಿ ಆರೋಗ್ಯ ವಿಚಾರಿಸಿಕೊಳ್ಳುತ್ತಿದ್ದಾರೆ.
ಬಿಜೆಪಿ ಸೇರದಿದ್ದರೆ ಜೈಲಿಗೆ ಹಾಕುತ್ತೇನೆ; ಡಿಕೆಶಿಗೆ ಹೀಗೆ ಹೆದರಿಸಿದ ಪೊಲೀಸ್ ಅಧಿಕಾರಿ ಯಾರು?
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


