Thursday, October 29, 2026
spot_img
More
    spot_img
    HomeBreaking Newsಆಪ್‌ ಪ್ರಾಥಮಿಕ ಸದಸ್ಯತ್ವಕ್ಕೆ ದೆಹಲಿ ಸಾರಿಗೆ ಸಚಿವ ಕೈಲಾಶ್‌ ಗೆಹ್ಲೋಟ್‌ ರಾಜೀನಾಮೆ

    ಆಪ್‌ ಪ್ರಾಥಮಿಕ ಸದಸ್ಯತ್ವಕ್ಕೆ ದೆಹಲಿ ಸಾರಿಗೆ ಸಚಿವ ಕೈಲಾಶ್‌ ಗೆಹ್ಲೋಟ್‌ ರಾಜೀನಾಮೆ

    ನವದೆಹಲಿ- ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ, ದೆಹಲಿಯ ಸಾರಿಗೆ ಸಚಿವ ಮತ್ತು ಹಿರಿಯ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಕೈಲಾಶ್ ಗೆಹ್ಲೋಟ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

    ಮುಂದಿನ ಫೆಬ್ರವರಿ ತಿಂಗಳಲ್ಲಿ ದೆಹಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ದಿಢೀರ್ ಬೆಳವಣಿಗೆ ಎಎಪಿಗೆ ಭಾರೀ ಹಿನ್ನಡೆ ಎಂದು ಹೇಳಲಾಗಿದೆ. ಎಎಪಿಯ ರಾಷ್ಟ್ರೀಯ ಸಂಚಾಲಕ. ಹಾಗೂ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ದೆಹಲಿ ಮುಖ್ಯಮಂತ್ರಿ ಅತಿಶಿ ಅವರನ್ನು ಉದ್ದೇಶಿಸಿ ಬರೆದ ರಾಜೀನಾಮೆ ಪತ್ರದಲ್ಲಿ ಗಹ್ಲೋಟ್, ಈಡೇರಿಸದ ಭರವಸೆಗಳು ಮತ್ತು ಇತ್ತೀಚಿನ ಕೆಲವು ವಿವಾದಗಳು ತಮ್ಮ ರಾಜೀನಾಮೆಗೆ ಕಾರಣವೆಂದು ಉಲ್ಲೇಖಿಸಿದ್ದಾರೆ.

    ಸಾರಿಗೆ, ಆಡಳಿತ ಸುಧಾರಣೆಗಳು, ಐಟಿ, ಗೃಹ, ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ಖಾತೆಗಳನ್ನು ಹೊಂದಿರುವ ಸಚಿವ ಕೈಲಾಶ್ ಗಹ್ಲೋಟ್ ಅವರು ತಮ್ಮ ರಾಜೀನಾಮೆಯನ್ನು ಮಂತ್ರಿ ಮಂಡಲಕ್ಕೆ ಸಲ್ಲಿಸಿದ್ದಾರೆ.
    ಎಎಪಿ ಸರ್ಕಾರದ ಪ್ರಮುಖ ಸಚಿವರಾಗಿದ್ದ ಗಹ್ಲೋಟ್, ದೆಹಲಿಯ ಜನರಿಗೆ ನೀಡಿದ ಪ್ರಮುಖ ಭರವಸೆಗಳನ್ನು ಈಡೇರಿಸಲು ಪಕ್ಷದ ಅಸಮರ್ಥತೆಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

    ಯಮುನಾ ನದಿಯನ್ನು ಶುಚಿಗೊಳಿಸುವಲ್ಲಿ ವಿಫಲವಾಗಿರುವುದನ್ನು ಅವರು ತಮ್ಮ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ಇದು ಪ್ರಮುಖ ಚುನಾವಣಾ ವಿಷಯವಾಗಿತ್ತು ಎಂಬುದನ್ನು ಉಲ್ಲೇಖಿಸಿದ್ದಾರೆ.”ನಾವು ಜನರಿಗೆ ಯಮುನಾವನ್ನು ಸ್ವಚ್ಛಗೊಳಿಸುವ ಭರವಸೆ ನೀಡಿದ್ದೇವೆ, ಆದರೆ ಆ ಬದ್ಧತೆಯನ್ನು ಪೂರೈಸುವಲ್ಲಿ ನಾವು ವಿಫಲರಾಗಿದ್ದೇವೆ” ಎಂದು ಅವರು ಅಸಮಾಧಾನ ಹೊರ ಹಾಕಿದ್ದಾರೆ.

    ಕೈಲಾಶ್ ಗಹ್ಲೋಟ್ ರಾಜೀನಾಮೆಯ ನಂತರ ತನ್ನ ಮೊದಲ ಅಧಿಕೃತ ಪ್ರತಿಕ್ರಿಯೆಯಲ್ಲಿ, ಎಎಪಿ ಸಂಸದ ಸಂಜಯ್ ಸಿಂಗ್, ಕೀಳು ಮಟ್ಟದ ರಾಜಕೀಯದ ಮೂಲಕ ಬಿಜೆಪಿ ಯಶಸ್ವಿಯಾಗಿ “ಪಿತೂರಿ” ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ತನ್ನ ಷಡ್ಯಂತ್ರ, ಕೀಳುಮಟ್ಟದ ರಾಜಕಾರಣದಲ್ಲಿ ಯಶಸ್ವಿಯಾಗಿದೆ. ಬಿಜೆಪಿಯ ಒತ್ತಡಕ್ಕೆ ಒಳಗಾದ ಮತ್ತು ಜಾರಿ ನಿರ್ದೇಶನಾಲಯ (ಇಡಿ)ಯಿಂದ ವಿಚಾರಣೆಗೆ ಒಳಗಾದ ಗಹ್ಲೋಟ್ ಅವರನ್ನು ಸಿಬಿಐ ಮತ್ತು ಇಡಿ ಸೇರಿದಂತೆ ಕೇಂದ್ರೀಯ ಏಜೆನ್ಸಿಗಳು ಗುರಿಯಾಗಿಸುತ್ತಿವೆ ಎಂದು ಸಿಂಗ್ ಹೇಳಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search