ರಾಯಚೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಇಂದು ( ನವೆಂಬರ್ 17 ) ಪಿಡಿಒ ಪರೀಕ್ಷೆ ನಡೆಯುತ್ತಿದ್ದು, ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿ ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿಗಳು ಧರಣಿ ನಡೆಸಿದ್ದಾರೆ.
ಪರೀಕ್ಷಾ ಕೇಂದ್ರದ ಒಂದು ಕೊಠಡಿಯಲ್ಲಿ 24 ಅಭ್ಯರ್ಥಿಗಳನ್ನು ಕೂರಿಸಲಾಗಿತ್ತು. ಆದರೆ 24 ಪ್ರಶ್ನೆ ಪತ್ರಿಕೆಗಳ ಬದಲಾಗಿ ಕೇವಲ 12 ಪ್ರಶ್ನೆ ಪತ್ರಿಕೆಗಳನ್ನು ಮಾತ್ರ ಹಂಚಲು ತರಲಾಗಿತ್ತು. ಹೀಗೆ ಪ್ರಶ್ನೆ ಪತ್ರಿಕೆ ಹಂಚಿಕೆ ವೇಳೆ ಕೆಪಿಎಸ್‌ಸಿ ಮಾಡಿಕೊಂಡ ಯಡವಟ್ಟಿನ ವಿರುದ್ಧ ಪರೀಕ್ಷೆಗೆ ಆಗಮಿಸಿದ್ದ ಅಭ್ಯರ್ಥಿಗಳು ಅಸಮಾಧಾನಗೊಂಡಿದ್ದಾರೆ.
ಇದರ ವಿರುದ್ಧ ಆಕ್ರೋಶಗೊಂಡ ಅಭ್ಯರ್ಥಿಗಳು ಸಿಂಧನೂರು – ಕುಷ್ಟಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿದ್ದು, ಸದ್ಯ ಪಿಡಿಒ ಪ್ರಶ್ನೆ ಬರೆಯುತ್ತಿರುವ ಅಭ್ಯರ್ಥಿಗಳಲ್ಲಿ ಇದು ಆತಂಕ ಮೂಡಿಸಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


