ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಜಮೀರ್ ಅಹಮದ್ ನೀಡಿರುವ ಹೇಳಿಕೆ ಸರಿಯಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ಹೊರಹಾಕಿದ್ದಾರೆ.
ಉಪಚುನಾವಣೆ ಪ್ರಚಾರದ ವೇಳೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸಚಿವ ಜಮೀರ್ ಅಹಮ್ಮದ್ ಖಾನ್ ನೀಡಿರುವ ಹೇಳಿಕೆ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮೀರ್ ಅಹಮದ್ ಹೇಳಿಕೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಯಾರು ಸಹ ಬಣ್ಣದ ಬಗ್ಗೆ ಹಾಗೂ ಹಾವ-ಭಾವದ ಬಗ್ಗೆ ಮಾತನಾಡುವುದು ಸರಿಯಲ್ಲ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಯಾರು ಕೂಡ ವೈಯಕ್ತಿಕವಾಗಿ ನಿಂದನೆ ಮಾಡಬಾರದು ಎಂದು ಸಲಹೆ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಈ ಹಿಂದೆ ಮಾಜಿ ಸಚಿವ ಅರಗ ಜ್ಞಾನೇಂದ್ರ ಅವರು ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಹೇಳಿಕೆ ನೀಡಿದ್ದರು. ಖರ್ಗೆ ಮುಖ ಸುಟ್ಟು ಹೋದ ಹಾಗೆ ಕಾಣಿಸುತ್ತದೆ. ಅವರ ಚರ್ಮ ಸುಟ್ಟು ಹೋಗಿದೆ, ಬ್ಲ್ಯಾಕ್ ಆಗಿದೆ ಎಂದು ಹೇಳಿಕೆ ನೀಡಿದ್ದರು. ಆ ಸಂದರ್ಭದಲ್ಲಿ ಯಾಕೆ ಅರಗ ಜ್ಞಾನೇಂದ್ರ ವಿರುದ್ಧ ಬಿಜೆಪಿ-ಜೆಡಿಎಸ್ ನಾಯಕರು ವಿರೋಧ ವ್ಯಕ್ತಪಡಿಸಲಿಲ್ಲ. ಯಾಕೆ ಇದು ರಾಷ್ಟ್ರೀಯ ಸುದ್ದಿ ಆಗಲಿಲ್ಲ ಎಂದು ಪ್ರಶ್ನೆ ಮಾಡಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


