ಶಿವಮೊಗ್ಗ: ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ ನಾವೇ ಗೆಲುವು ಸಾಧಿಸುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೂರು ಉಪಚುನಾವಣೆ ಫಲಿತಾಂಶ ಸಂಬಂಧ ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವೇ ಗೆಲುವು ಸಾಧಿಸುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ. ಅನುಮಾನ ಇದ್ದರೆ ಫಲಿತಾಂಶ ಬರುವ ತನಕ ಕಾದು ನೋಡಿ ಎಂದು ರಾಜ್ಯ ಸರ್ಕಾರಕ್ಕೆ ಟಾಂಗ್ ನೀಡಿದರು.
ಇನ್ನು ಬಿಜೆಪಿ ವಿರುದ್ಧ 40% ಕಮಿಷನ್ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ಗರಂ ಆಗಿ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು. 40% ಕಮಿಷನ್ ಬಗ್ಗೆ ಲೋಕಾಯುಕ್ತರೇ ಈಗಾಗಲೇ ಹೇಳಿದ್ದಾರೆ. ಸುಳ್ಳು ಆರೋಪ ಮಾಡೋದು ಸರಿಯಲ್ಲ. ಕಾಂಗ್ರೆಸ್ ನಾಯಕರು ಇನ್ನಾದರೂ ಸುಳ್ಳು ಆರೋಪ ಮಾಡುವುದನ್ನು ಬಿಟ್ಟು ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಸಲಹೆ ನೀಡುವ ಮೂಲಕ ಸರ್ಕಾರಕ್ಕೆ ಚಾಟಿ ಬೀಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


