ಬಾಗಲಕೋಟೆ: ಸಚಿವ ಜಮೀರ್ ಅಹಮ್ಮದ್ ಖಾನ್ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದ ಉಪಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಪ್ರತಿಪಕ್ಷಗಳ ನಾಯಕರ ಜೊತೆ ನಡೆದ ವಿವಾದದ ಹೇಳಿಕೆಗಳ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.
ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ಕರಿಯ ಹಾಗೂ ದೇವೇಗೌಡ ಅವರ ಕುಟುಂಬವನ್ನು ಕೊಂಡುಕೊಳ್ಳುತ್ತೇವೆ ಎಂದು ಹೇಳಬಾರದಿತ್ತು, ಹಾಗೇಯೇ ಕುಮಾರಸ್ವಾಮಿ ಕೂಡ ಮುಸ್ಲಿಂ ಸಮುದಾಯ ಟೈರ್ ಪಂಚರ್ ಅಂಗಡಿಯಲ್ಲಿ ಸಂಪಾದನೆ ಮಾಡಿ ದೇವೇಗೌಡ ಕುಟುಂಬ ಕೊಂಡುಕೊಳ್ಳುತ್ತಾರಾ? ಎಂದು ಮಾತನಾಡಬಾರದಿತ್ತು.
ಇಬ್ಬರು ಜವಾಬ್ದಾರಿ ಸ್ಥಾನದಲ್ಲಿದ್ದುಕೊಂಡು ಸಾರ್ವಜನಿಕವಾಗಿ ಈ ರೀತಿ ವಿವಾದಾತ್ಮಕ ಹೇಳಿಕೆ ನೀಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


