ಮೈಸೂರು: ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರಾಷ್ಟ್ರಪ್ರಶಸ್ತಿ ವಿಜೇತ ಬಾಲನಟ ರೋಹಿತ್ ಅವರ ಆರೋಯ ಈಗ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಮೈಸೂರು: ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರಾಷ್ಟ್ರಪ್ರಶಸ್ತಿ ವಿಜೇತ ಬಾಲನಟ ರೋಹಿತ್ ಅವರ ಆರೋಯ ಈಗ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರೋಹಿತ್ ಅವರ ದವಡೆ ಭಾಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿ ಪ್ಲೇಟ್ ಅಳವಡಿಸಲಾಗಿದ್ದು, 8 ತಿಂಗಳು ದ್ರವ ಆಹಾರ ಸೇವಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಅಪಘಾತದಲ್ಲಿ ರೋಹಿತ್ ತಾಯಿ ಛಾಯಾಲಕ್ಷ್ಮೀ ಅವರಿಗೂ ಗಂಭೀರ ಗಾಯಗಳಾಗಿದ್ದು, ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅಪಘಾತವಾದಾಗ ರಸ್ತೆ ಬಳಿ ನಿಂತಿದ್ದ ರೋಹಿತ್, ರಕ್ತ ಸುರಿಯುತ್ತಿದ್ದರೂ ಧೃತಿಗೆಡಲಿಲ್ಲ ಎಂದು ಸಂಬಂಧಿಕರು ಹೇಳಿ, ಆಶ್ಚರ್ಯಕ್ಕೀಡುಮಾಡಿದ್ದಾರೆ.
ಪಾಂಡವಪುರ ನಿವಾಸಿಯಾಗಿರುವ ರೋಹಿತ್ ಅವರಿಗೆ ʼಒಂದಲ್ಲಾ ಎರಡಲ್ಲಾʼ ಚಿತ್ರದ ನಟನೆಗಾಗಿ ರಾಷ್ಟ್ರಪ್ರಶಸ್ತಿ ಬಂದಿತ್ತು. ಇವರು ದರ್ಶನ್ ಅಭಿನಯದ ಕಾಟೇರಾ ಚಿತ್ರದಲ್ಲೂ ಅಭಿನಯಿಸಿದ್ದಾರೆ.
ಪಾಂಡವಪುರದ ಬಳಿ ಕಾರು ಅಪಘಾತ ನಡೆದಿದ್ದು, ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


