ಮೈಸೂರು: ಒಂದಲ್ಲಾ ಎರಡಲ್ಲಾ ಚಿತ್ರದ ಮೂಲಕ ಜನಮನ ಹಾಗೂ ಅತ್ಯುತ್ತಮ ಬಾಲನಟ ರಾಷ್ಟ್ರ ಪ್ರಶಸ್ತಿ ಗೆದ್ದಿದ್ದ ಬಾಲ ನಟ ರೋಹಿತ್ ಕಳೆದ ವರ್ಷ ತೆರೆಕಂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕಾಟೇರ ಚಿತ್ರದಲ್ಲಿಯೂ ನಟಿಸಿ ಸೈ ಎನಿಸಿಕೊಂಡಿದ್ದರು. ಚಿಕ್ಕ ವಯಸ್ಸಿನಲ್ಲಿಯೇ ಇಷ್ಟು ದೊಡ್ಡ ಸಾಧನೆ ಮಾಡಿದ ರೋಹಿತ್ ಸದ್ಯ ಮೈಸೂರಿನ ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಿತಿ ಗಂಭೀರವಾಗಿದೆ.
ಶ್ರೀರಂಗಪಟ್ಟಣದಿಂದ ಬೆಂಗಳೂರಿಗೆ ಕಾರಿನಲ್ಲಿ ಪ್ರಯಾಣಿಸುವಾಗ ಅಪಘಾತ ಸಂಭವಿಸಿದ್ದು, ಕೂಡಲೇ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಕಾರಿನಲ್ಲಿ ರೋಹಿತ್ ಹಾಗೂ ಆತನ ತಾಯಿ, ಟೀಚರ್ ಹಾಗೂ ಆತನ ಸ್ನೇಹಿತರಿದ್ದರು ಎಂದು ವರದಿಯಾಗಿದೆ.
ಕೇರಳದ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬಾಲನಟ ರೋಹಿತ್ ತಲೆಗೆ ಗಂಭೀರ ಪೆಟ್ಟಾಗಿದೆ ಹಾಗೂ ಒಸಡು ಹೊಡೆದಿದೆ. ಇನ್ನುಳಿದವರ ಸ್ಥಿತಿಯೂ ಗಂಭೀರವಾಗಿದ್ದು, ಚಿಕಿತ್ಸೆ ಜರುಗುತ್ತಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


