Sunday, November 1, 2026
spot_img
More
    spot_img
    HomeNational/ Internationalಐತಿಹಾಸಿಕ 'ಹೈಪರ್‍ಸಾನಿಕ್ ಕ್ಷಿಪಣಿ' ಪರೀಕ್ಷಾರ್ಥ ಪ್ರಯೋಗ ಮಾಡಿದ ಭಾರತ

    ಐತಿಹಾಸಿಕ ‘ಹೈಪರ್‍ಸಾನಿಕ್ ಕ್ಷಿಪಣಿ’ ಪರೀಕ್ಷಾರ್ಥ ಪ್ರಯೋಗ ಮಾಡಿದ ಭಾರತ

    ನವದೆಹಲಿ: ಬಹು ನಿರೀಕ್ಷಿತ ‘ಹೈಪರ್‍ಸಾನಿಕ್ ಕ್ಷಿಪಣಿ’ ಪರೀಕ್ಷಾರ್ಥ ಪ್ರಯೋಗ ಮಾಡುವ ಮೂಲಕ ಭಾರತ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದು, ಈ ಪರೀಕ್ಷೆ ಯಶಸ್ವಿಯಾಗುವ ಮೂಲಕ ಭಾರತ ಈ ಕ್ಷಿಪಣಿ ವ್ಯವಸ್ಥೆ ಇರುವ ಕೆಲವೇ ದೇಶಗಳ ಪಟ್ಟಿಗೆ ಸೇರಿದೆ.

    ಈ ಸಾಧನೆಯೊಂದಿಗೆ, ಭಾರತವು ನಿರ್ಣಾಯಕ ಮತ್ತು ಸುಧಾರಿತ ಮಿಲಿಟರಿ ತಂತ್ರಜ್ಞಾನವನ್ನು ಹೊಂದಿರುವ ಕೆಲವೇ ಕೆಲವು ರಾಷ್ಟ್ರಗಳ ಪಟ್ಟಿಗೆ ಸೇರ್ಪಡೆಗೊಂಡಿದೆ, ಇದು ದೇಶದ ಮಿಲಿಟರಿ ಸನ್ನದ್ಧತೆಗೆ ಗಮನಾರ್ಹ ಉತ್ತೇಜನವನ್ನು ಸೂಚಿಸುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಹೇಳಿದ್ದಾರೆ.

    ಇದರಿಂದ ದೇಶದ ರಕ್ಷಣಾ ಸಾಮಥ್ರ್ಯ ಇನ್ನಷ್ಟು ಬಲಗೊಂಡಿದೆ. ‘ಇಂತಹ ಗಮನಾರ್ಹ ಸುಧಾರಿತ ಮಿಲಿಟರಿ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವ ಸಾಮಥ್ರ್ಯವನ್ನು ಹೊಂದಿರುವ ಕೆಲವೇ ಕೆಲವು ರಾಷ್ಟ್ರಗಳ ಗುಂಪಿನಲ್ಲಿ ಭಾರತವು ಗುರುತಿಸಿಕೊಂಡಿದೆ’ ಎಂದು ಹೇಳಿದ್ದಾರೆ.

    ಈ ಕ್ಷಿಪಣಿಯನ್ನು ಸಶಸ್ತ್ರ ಪಡೆಗಳಿಗೆ 1500 ಕಿಮೀಗಿಂತ ಹೆಚ್ಚಿನ ವ್ಯಾಪ್ತಿಯವರೆಗೆ ವಿವಿಧ ಪೇಲೋಡ್‍ಗಳನ್ನು ಸಾಗಿಸಲು ವಿನ್ಯಾಸಗೊಳಿಸಲಾಗಿದೆ. ಈ ಅದ್ಭುತ ಸಾಧನೆಗೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‍ಡಿಒ), ಸಶಸ್ತ್ರ ಪಡೆಗಳು ಮತ್ತು ಎಲ್ಲರನ್ನು ಶ್ಲಾಘಿಸಿದ್ದಾರೆ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search