ಸದ್ಯ ನಡೆಯುತ್ತಿರುವ ರಣಜಿ ಟ್ರೋಫಿಯಲ್ಲಿ ಭಾಗವಹಿಸುವ ಮೂಲಕ ಕ್ರಿಕೆಟಿಗ ಮೊಹಮ್ಮದ್ ಶಮಿ ಒಂದು ವರ್ಷದ ಬಳಿಕ ಕ್ರಿಕೆಟ್ಗೆ ಮರಳಿದ್ದಾರೆ. ಪಂದ್ಯವೊಂದರಲ್ಲಿ ಏಳು ವಿಕೆಟ್ ಪಡೆದು ಮಿಂಚಿ ಟೀಮ್ ಇಂಡಿಯಾಗೆ ಭರ್ಜರಿ ಕಮ್ಬ್ಯಾಕ್ ಮಾಡುವ ಸೂಚನೆಯನ್ನೂ ಸಹ ನೀಡಿದ್ದಾರೆ.
ಹೀಗೆ ಎಲ್ಲವೂ ಚೆನ್ನಾಗಿಯೇ ಇದೆ ಎನ್ನುವಾಗಲೇ ಶಮಿ ಕುರಿತಾಗಿ ಹರಿದಾಡುತ್ತಿರುವ ಟ್ವೀಟ್ ಒಂದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಹೌದು, ಮೋಹನ್ ಕೃಷ್ಣ ಎಂಬುವವರು ಈ ಕುರಿತು ಪೋಸ್ಟ್ ಹಂಚಿಕೊಂಡಿದ್ದು, ಮೊಹಮ್ಮದ್ ಶಮಿ ಅವರ ಹಳೆಯ ಡ್ರೈವಿಂಗ್ ಲೈಸೆನ್ಸ್ ಅನ್ನು ಇಲ್ಲಿ ಲಗತ್ತಿಸಿದ್ದಾರೆ.
ಇನ್ನು ಈ ಡ್ರೈವಿಂಗ್ ಲೈಸೆನ್ಸ್ ಪ್ರಕಾರ ಮೊಹಮ್ಮದ್ ಶಮಿ ಅವರ ವಯಸ್ಸು 42. ಆದರೆ ಮೊಹಮ್ಮದ್ ಶಮಿ ಅವರು ಟೀಮ್ ಇಂಡಿಯಾಗೆ ಸಲ್ಲಿಸಿರುವ ದಾಖಲೆಗಳ ಪ್ರಕಾರ ಅವರ ವಯಸ್ಸು 34. ಹೀಗೆ ಎಂಟು ವರ್ಷಗಳ ಅಂತರ ಕಂಡುಬರುತ್ತಿದ್ದು, ಇದರ ಕುರಿತು ತನಿಖೆ ನಡೆಸಿ ಸತ್ಯಾಂಶ ತಿಳಿಯಬೇಕು ಎಂದು ಆಗ್ರಹಿಸಿದ್ದಾರೆ.
ಈ ಹಿಂದೆ ಅಂಡರ್ 19 ಕ್ರಿಕೆಟ್ನಲ್ಲಿ ಸ್ಥಾನ ಪಡೆದುಕೊಳ್ಳುವ ಸಲುವಾಗಿ ಕೆಲ ಆಟಗಾರರು ಕಡಿಮೆ ವಯಸ್ಸಿನ ದಾಖಲೆ ನೀಡಿ ಸಿಕ್ಕಿ ಬಿದ್ದ ಉದಾಹರಣೆಗಳಿವೆ. ಸದ್ಯ ಮೊಹಮ್ಮದ್ ಶಮಿ ಅವರ ವಿರುದ್ಧದ ಈ ಆರೋಪದ ಕುರಿತು ಬಿಸಿಸಿಐ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾದುನೋಡಬೇಕಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


