Monday, November 2, 2026
spot_img
More
    spot_img
    HomeStateಕಾಂಗ್ರೆಸ್‌ ಸರ್ಕಾರ 60% ಸರ್ಕಾರ ಎಂಬುದಕ್ಕೆ ನಮ್ಮ ಬಳಿ ದಾಖಲೆ ಇದೆ: ಆರ್‌ ಅಶೋಕ್‌

    ಕಾಂಗ್ರೆಸ್‌ ಸರ್ಕಾರ 60% ಸರ್ಕಾರ ಎಂಬುದಕ್ಕೆ ನಮ್ಮ ಬಳಿ ದಾಖಲೆ ಇದೆ: ಆರ್‌ ಅಶೋಕ್‌

    ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 60% ಕಮಿಷನ್ ಸರ್ಕಾರ ಎಂಬುದಕ್ಕೆ ನಮ್ಮ ಬಳಿ ದಾಖಲೆಗಳಿವೆ. ಸೂಕ್ತ ಕಾಲದಲ್ಲಿ ಅವುಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆರೋಪ ಮಾಡಿದ್ದಾರೆ.

    ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ 40% ಕಮಿಷನ್ ಸರ್ಕಾರ ಎಂದು ಆಕಾಶ-ಭೂಮಿ ಒಂದಾಗುವಂತೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅಬ್ಬರಿಸಿದ್ದರು ಎಂದು ವಾಗ್ದಾಳಿ ನಡೆಸಿದರು.

    ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಮಾಡಿರುವ ಆರೋಪಕ್ಕೆ ಯಾವುದೇ ಸೂಕ್ತ ದಾಖಲೆಗಳಿಲ್ಲ ಎಂದು ಲೋಕಾಯುಕ್ತ ತನಿಖಾಧಿಕಾರಿಗಳೇ ಕ್ಲೀನ್‍ಚಿಟ್ ಕೊಟ್ಟಿದ್ದಾರೆ. ಈಗ ಸರ್ಕಾರ ರಾಜ್ಯದ ಜನತೆಯ ಕ್ಷಮೆ ಕೇಳಲಿ ಎಂದು ಒತ್ತಾಯಿಸಿದರು.

    ನಮ್ಮ ಮೇಲೆ 40% ಆರೋಪ ಮಾಡಿದ್ದರು ಅದರಿಂದಲೂ ಸಹ ನಾವು ಮುಕ್ತರಾಗಿದ್ದೇವೆ. ಆರೋಪ ಮಾಡಿದ್ದವರು ಕಾಂಗ್ರೆಸ್ ಟೂಲ್ ಕಿಟ್ ಆಗಿ ಆರೋಪ ಮಾಡಿದ್ದರು. ನಿರುದ್ಯೋಗಿ ಕಂಟ್ರಾಕ್ಟರ್ ಗಳೆಲ್ಲ ಸೇರಿಕೊಂಡು ನಮ್ಮ ಮೇಲೆ ಆರೋಪ ಮಾಡಿದರು. ಆರೋಪ ಮಾಡಿದರೂ ಸಹ ಇಲ್ಲಿಯವರೆಗೂ ಅವರ ಕೈನಲ್ಲಿ ಸಾಬೀತು ಮಾಡಲು ಸಾಧ್ಯವಾಗಿಲ್ಲ ಎಂದು ಕಿಡಿಕಾರಿದರು.

    ಅಬಕಾರಿ ಇಲಾಖೆಯವರು ಸಚಿವರು ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂದು ರಾಜ್ಯಪಾಲರಿಗೆ ದೂರು ಕೊಟ್ಟಿದ್ದಾರೆ. ಇದನ್ನು ಪ್ರಧಾನಿ ನರೇಂದ್ರಮೋದಿ ಹೇಳಿದರೆ ಸಾಕ್ಷಿ ಕೊಡಿ ಎಂದು ಸಿದ್ದರಾಮಯ್ಯ ಕೇಳುತ್ತಿದ್ದಾರೆ. ನಮ್ಮ ಮೇಲೆ ಆರೋಪ ಮಾಡುವಾಗ ಇವರು ಯಾವ ದಾಖಲೆಗಳನ್ನು ಇಟ್ಟುಕೊಂಡಿದ್ದರು. ನಾಚಿಕೆಯಾಗುವುದಿಲ್ಲವೇ? ಎಂದು ಪ್ರಶ್ನಿಸಿದರು.

    ನಾನು ವಿಪಕ್ಷ ನಾಯಕರಾಗಿ ಇಂದಿಗೆ ಒಂದು ವರ್ಷ ಆಗಿದೆ. ನಮ್ಮ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಮಾಡಿರುವುದು ಸುಳ್ಳಾಗಿದೆ. ಆರೋಪ ಮಾಡಿದ್ದ ವ್ಯಕ್ತಿ ಕೆಲಸಾನೇ ಮಾಡಿರಲಿಲ್ಲ. 14 ತಿಂಗಳಲ್ಲಿ 40% ಕಮಿಷನ್ ಆರೋಪ ಸಾಬೀತುಪಡಿಸಲು ಆಗಲಿಲ್ಲ. ಇಂದು ಲೋಕಾಯುಕ್ತ ಕ್ಲೀನ್‍ಚಿಟ್ ಕೊಟ್ಟಿದೆ ಎಂದು ಹೇಳಿದರು.

    ಸಿದ್ದರಾಮಯ್ಯ ತೆರೆದ ಪುಸ್ತಕ ಎನ್ನುತ್ತಾರೆ. ವಾಲ್ಮೀಕಿ ಹಗರಣದಲ್ಲಿ ಸಾಕ್ಷಿ ಸಿಕ್ಕಿದೆ. ಇಡಿಯವರು ಇದನ್ನು ಅನುಮೋದನೆ ಮಾಡಿದ್ದಾರೆ. ಬಳ್ಳಾರಿಯಲ್ಲಿ ಯಾರು ಯಾರಿಗೆ ಹೋಗಿದೆ ಎಂದು ಚಾರ್ಜ್‍ಶೀಟ್‍ನಲ್ಲಿ ಉಲ್ಲೇಖಿಸಿದೆ. ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು ಎಂದು ತರಾಟೆಗೆ ತೆಗೆದುಕೊಂಡರು.

    ದಿನ ಒಬ್ಬೊಬ್ಬ ಮಂತ್ರಿ ದರೋಡೆಯ ಪುಸ್ತಕ ತೆರೆಯುತ್ತಿದ್ದಾರೆ. ಕನ್ನ ಹಾಕುವ ಮಂತ್ರಿ ರಾಜ್ಯದಲ್ಲಿದ್ದಾರೆ. ತೆರೆದ ಪುಸ್ತಕ ನಾವು ನೋಡಿದರೆ ಕಪ್ಪುಚುಕ್ಕೆ ಇಡೋಕೆ ಜಾಗವೇ ಇಲ್ಲ ಎಂದು ವ್ಯಂಗ್ಯವಾಡಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search