Tuesday, November 3, 2026
spot_img
More
    spot_img
    HomeStateಕಾರಿನಲ್ಲಿ ಕುಳಿತು ಬೆಂಕಿ ಹಚ್ಚಿಕೊಂಡು ಹೊಟೇಲ್‌ ಉದ್ಯಮಿ ಆತ್ಮಹತ್ಯೆ

    ಕಾರಿನಲ್ಲಿ ಕುಳಿತು ಬೆಂಕಿ ಹಚ್ಚಿಕೊಂಡು ಹೊಟೇಲ್‌ ಉದ್ಯಮಿ ಆತ್ಮಹತ್ಯೆ

    ಬೆಂಗಳೂರು: ಹೊಟೇಲ್ ಉದ್ಯಮಿಯೊಬ್ಬರು ಕಾರಿನಲ್ಲಿ ಕುಳಿತು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮುದ್ದಿನಪಾಳ್ಯದ ವಿಶ್ವೇಶ್ವರ ಬಡಾವಣೆಯಲ್ಲಿ ನಡೆದಿದೆ.

    ನಾಗರಬಾವಿ ಎರಡನೇ ಹಂತದ 12ನೇ ಮುಖ್ಯರಸ್ತೆ ನಿವಾಸಿ ಪ್ರದೀಪ್‌ (42) ಎಂಬ ಹೊಟೇಲ್‌ ಉದ್ಯಮಿ ಆತ್ಮಹತ್ಯೆಗೆ ನಿನ್ನೆ ( ನವೆಂಬರ್‌ 16 ) ಶರಣಾಗಿದ್ದಾರೆ. ಇನ್ನು ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತನಿಖೆಯಲ್ಲಿ ಬಯಲಾಗಬೇಕಿದ್ದು, ಹೊಟೇಲ್‌ ಉದ್ಯಮದಲ್ಲಿ ಅಪಾರ ಪ್ರಮಾಣದ ನಷ್ಟ ಉಂಟಾಗಿ ಪ್ರದೀಪ್‌ ಸಂಕಷ್ಟದಲ್ಲಿದ್ದರು. ಈ ಕಾರಣದಿಂದಾಗಿಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ.

    ʼಶನಿವಾರ ಮಧ್ಯಾಹ್ನದ ವೇಳೆ ತಮ್ಮ ಸ್ಕೋಡಾ ಕಾರಿನಲ್ಲಿ ಬಂದಿದ್ದ ಪ್ರದೀಪ್ ಕಾರಿನಲ್ಲಿ ಕುಳಿತು ಮೈಮೇಲೆ ಪೆಟ್ರೋಲ್‌ ಸುರಿದುಕೊಂಡು ನಂತರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರು ಸಂಪೂರ್ಣ ಭಸ್ಮವಾಗಿದೆ. ಮೃತದೇಹ ಗುರುತಿಸಲಾಗದಷ್ಟು ಸುಟ್ಟು ಹೋಗಿತ್ತು. ಕಾರು ಸಂಚರಿಸಿದ್ದ ಮಾರ್ಗದಲ್ಲಿದ್ದ ಸಿಸಿಟಿವಿ ದೃಶ್ಯ ಆಧರಿಸಿ ಗುರುತು ಪತ್ತೆ ಮಾಡಲಾಯಿತುʼ ಎಂದು ಪೊಲೀಸರು ತಿಳಿಸಿದರು.

    ದಯವಿಟ್ಟು ಗಮನಿಸಿ: ಯಾವುದೇ ಸಮಸ್ಯೆಗೂ ಸಾವೊಂದೇ ಪರಿಹಾರವಲ್ಲ. ಆತ್ಮಹತ್ಯೆ ಮಹಾಪಾಪ. ನಿಮಗೆ ಅಂತಹ ಆಲೋಚನೆ ಬಂದಿದ್ದೇ ಆದರೆ ನಿಮ್ಮ ಹತ್ತಿರದವರ ಜತೆ ಮಾತನಾಡಿ. ಇಲ್ಲದಿದ್ದರೆ ಈ ಟೋಲ್‌ಫ್ರೀ ಸಹಾಯವಾಣಿಗೆ ಕರೆ ಮಾಡಿ: 9152987821


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search