Tuesday, August 4, 2026
spot_img
More
    spot_img
    HomeStateಯತ್ನಾಳ್‌ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಬಂದ್;‌ ರೈತರ ನೆರವಿಗೆ ನಿಂತ ಡಿಸಿ ಪೌಜಿಯಾ ತರನ್ನುಮ್‌

    ಯತ್ನಾಳ್‌ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಬಂದ್;‌ ರೈತರ ನೆರವಿಗೆ ನಿಂತ ಡಿಸಿ ಪೌಜಿಯಾ ತರನ್ನುಮ್‌

    ಕಲಬುರಗಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಬಂದ್‌ ಆದ ಹಿನ್ನೆಲೆ ಜಿಲ್ಲೆಯ ಚಿಂಚೋಳಿ ಮತ್ತು ಸೇಡಂ ತಾಲೂಕಿನ ಕಬ್ಬು ಬೆಳೆಗಾರರು ಕಂಗಾಲಾಗಿದ್ದರು. ಸದ್ಯ ಈ ಭಾಗದ ರೈತರ ನೆರವಿಗೆ ಕಲಬುರಗಿ ಜಿಲ್ಲಾಧಿಕಾರಿ ಪೌಜಿಯಾ ತರನ್ನುಮ್‌ ಧಾವಿಸಿದ್ದಾರೆ.

    Advertisement

    ಸರ್ಕಾರ ಹಾಗೂ ಬಿಜೆಪಿ ನಡುವಿನ ಕಿತ್ತಾಟದಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಪುನರಾರಂಭವಾಗುತ್ತಿಲ್ಲ. ಕಾರ್ಖಾನೆ ಆರಂಭವಾಗದ ಕಾರಣ ಸಾವಿರಾರು ಎಕರೆ ಕಬ್ಬು ಬೆಳೆದಿದ್ದ ರೈತರು ಕಂಗಾಲಾಗಿದ್ದರು.

    ಆದರೆ ಜಿಲ್ಲಾಧಿಕಾರಿ ಪೌಜಿಯಾ ತರನ್ನುಮ್‌ ಮಾಡಿದ ಉಪಾಯದಿಂದ ರೈತರ ಸಮಸ್ಯೆ ದೂರಾಗಿದೆ. ಚಿಂಚೋಳಿ ಹಾಗೂ ಸೇಡಂ ತಾಲೂಕಿನ ರೈತರು ಒಟ್ಟು 3000 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬನ್ನು ಡಿಸಿ ಪೌಜಿಯಾ ಅವರು ಸರ್ವೇ ಮಾಡಿಸಿ ಬಳಿಕ ಕಾರ್ಖಾನೆ ಜೊತೆ ಒಪ್ಪಂದ ಮಾಡಿಸಿದ್ದಾರೆ. ನಂತರ ಎರಡೂ ತಾಲೂಕಿನ ರೈತರು ಬೆಳೆದ ಕಬ್ಬನ್ನು ಸಮೀಪದ ಕೆಪಿಆರ್‌ ಸಕ್ಕರೆ ಕಾರ್ಖಾನೆ ಹಾಗೂ ಬೀದರ್‌ನ ಕಿಸಾನ್‌ ಸಕ್ಕರೆ ಕಾರ್ಖಾನೆಗೆ ಹಂಚಿಕೆ ಮಾಡಿ ಆದೇಶ ಹೊರಡಿಸಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading