Tuesday, November 3, 2026
spot_img
More
    spot_img
    HomeBreaking Newsಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ

    ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ

    ಮಹತ್ವದ ಅಂತರಾಷ್ಟ್ರೀಯ ಬೆಳವಣಿಗೆಯೊಂದರಲ್ಲಿ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದೆ. ಅಲ್ಲದೇ ಅವರಿಗೆ ಗಲ್ಲು ಶಿಕ್ಷೆ ವಿಧಿಸಿ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ತೀರ್ಪು ನೀಡಿದೆ.

    ಢಾಕಾದಲ್ಲಿರುವ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಸೋಮವಾರ 2024ರ ಗಲಭೆ ಪ್ರಕರಣದಲ್ಲಿ ಆಗ ಬಾಂಗ್ಲಾದೇಶದ ಪ್ರಧಾನಿಯಾಗಿದ್ದ ಶೇಖ್ ಹಸೀನಾ ದೋಷಿ ಎಂದು ತೀರ್ಪು ನೀಡಿದೆ. ವಿದ್ಯಾರ್ಥಿಗಳ ದಂಗೆಯನ್ನು ಹತ್ತಿಕ್ಕಲು ಸಶಸ್ತ್ರಪಡೆಗಳನ್ನು ಬಳಕೆ ಮಾಡಿಕೊಂಡು ಮಾನವೀಯತೆಯ ನಿಯಮ ಉಲ್ಲಂಘನೆ ಮಾಡಲಾಗಿದೆ ಎಂದು ಕೋರ್ಟ್ ಹೇಳಿದ್ದು, ಗಲ್ಲು ಶಿಕ್ಷೆ ವಿಧಿಸಲಾಗಿದೆ.

    ಕಳೆದ ಹಲವು ತಿಂಗಳುಗಳಿಂದ ಬಾಂಗ್ಲಾದೇಶದ ಪ್ರಧಾನಿಯಾಗಿದ್ದ ಶೇಖ್ ಹಸೀನಾ ವಿರುದ್ಧ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯಲ್ಲಿ ವಿಚಾರಣೆ ನಡೆಯುತ್ತಿತ್ತು. 2024ರಲ್ಲಿ ನಡೆದ ಗಲಭೆ ಬಳಿಕ ಬಾಂಗ್ಲಾದೇಶದ ಪ್ರಧಾನಿಯಾಗಿದ್ದ ಶೇಖ್ ಹಸೀನಾ ತಮ್ಮ ಸ್ಥಾನ ತ್ಯಜಿಸಿದ್ದರು. ಭಾರತಕ್ಕೆ ಓಡಿ ಬಂದಿದ್ದರು.

    ವಿಚಾರಣೆ ಸಮಯದಲ್ಲಿ ದಂಗೆಯ ವಿಡಿಯೋಗಳು, ಭದ್ರತಾ ಸಿಬ್ಬಂದಿಯ ಹೇಳಿಕೆಗಳು, ತನಿಖಾ ವರದಿಗಳನ್ನು ನ್ಯಾಯಮಂಡಳಿಯಲ್ಲಿ ಪರಿಶೀಲನೆ ಮಾಡಲಾಗಿತ್ತು. ಪ್ರತಿಭಟನೆ ಹತ್ತಿಕ್ಕಲು ಭದ್ರತಾ ಪಡೆಗಳು ಬಲಪ್ರಯೋಗ ಮಾಡಲು ಪ್ರಧಾನಿಗಳು ಸೂಚನೆ ನೀಡಿದ್ದರು ಎಂಬ ಆರೋಪ ಸಾಬೀತಾಗಿದೆ.

    ಸೋಮವಾರ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯ ತೀರ್ಪು ಪ್ರಕಟವಾಗುವ ಕಾರಣ ಕೋರ್ಟ್ ಹೊರಗೆ ಭಾರೀ ಭದ್ರತೆ ಕೈಗೊಳ್ಳಲಾಗಿತ್ತು. ಕೋರ್ಟ್‌ ಈಗ ಮಾಜಿ ಪ್ರಧಾನಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

    ಮೂವರು ನ್ಯಾಯಾಧೀಶರ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯು ಮಾಜಿ ಪಿಎಂ ಶೇಖ್ ಹಸೀನಾ ಮತ್ತು ಆಕೆಯ ಇಬ್ಬರು ಆಪ್ತರಾದ ಮಾಜಿ ಗೃಹ ಸಚಿವ ಅಸಾದುಜ್ ಖಾನ್ ಕಮಲ್ ಮತ್ತು ಪೊಲೀಸ್ ಇಲಾಖೆಯ ಮುಖ್ಯಸ್ಥರಾಗಿದ್ದ ಅಸಾದುಲ್ಲಾ ಅಲ್ ಮಹುಮ್ ವಿರುದ್ಧದ ಆರೋಪ ಸಾಬೀತಾಗಿದೆ ಎಂದು ಹೇಳಿದೆ.

    ಅಸಾದುಜ್ ಖಾನ್ ಕಮಲ್ ಮತ್ತು ಪೊಲೀಸ್ ಇಲಾಖೆಯ ಮುಖ್ಯಸ್ಥರಾಗಿದ್ದ ಅಸಾದುಲ್ಲಾ ಅಲ್ ಮಹುಮ್ ವಿರುದ್ಧ ಕೊಲೆ, ಕೊಲೆ ಪ್ರಯತ್ನ, ಹಿಂಸೆ, ಅನಾಗರಿಕ ಮಾನವೀಯ ನಡವಳಿಕೆ ಆರೋಪಗಳನ್ನು ಹೊರಿಸಲಾಗಿತ್ತು. ವಿದ್ಯಾರ್ಥಿಗಳ ಪ್ರತಿಭಟನೆಯನ್ನು ತಡೆಗಟ್ಟಲು ಬಲ ಪ್ರಯೋಗ ಮಾಡುವಂತೆ ಪಿಎಂ ಸೂಚನೆ ನೀಡಿದ್ದರು ಎಂಬುದು ಶೇಖ್ ಹಸೀನಾ ವಿರುದ್ಧದ ಆರೋಪವಾಗಿತ್ತು.

    ಜೂನ್ 2024ರಲ್ಲಿ ಪ್ರತಿಭಟನೆ ಮಾಡುತ್ತಿದ್ದ ವಿದ್ಯಾರ್ಥಿಗಳ ವಿರುದ್ಧ ಮಾರಕ ಆಯುಧಗಳ ಬಳಕೆ ಮಾಡುವಂತೆ ನಿರ್ದೇಶಿಸಲಾಗಿತ್ತು. ಜುಲೈ 15 ರಿಂದ ಆಗಸ್ಟ್ 15ರವರೆಗೆ 1,400 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿತ್ತು.

    ಕೋರ್ಟ್ ಹೇಳಿದ್ದೇನು?: ಪಿಎಂ ಶೇಖ್ ಹಸೀನಾ ಸರ್ಕಾರವು ವಿದ್ಯಾರ್ಥಿಗಳ ಬೇಡಿಕೆಗಳ ಕುರಿತು ಗಮನ ಹರಿಸಲಿಲ್ಲ ಮತ್ತು ವಿದ್ಯಾರ್ಥಿಗಳನ್ನು ಸಮಸ್ಯೆ ಆಲಿಸುವ ಬದಲು ಪ್ರತಿಭಟನೆಯನ್ನು ಹತ್ತಿಕ್ಕುವ ಕಡೆ ಹೆಚ್ಚು ಗಮನ ಹರಿಸಿದರು. ಪ್ರತಿಭಟನೆ ಮಾಡುವವರನ್ನು ನಿಂದಿಸಿದರು, ಅವರು ರಾಜದ್ರೋಹ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

    ಶೇಖ್ ಹಾಸಿನಾ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಸ್ಥಳದಿಂದ ನಿರ್ಗಮಿಸಿ ಎಂದು ಆದೇಶಿಸಿದರು. ಸಾಕ್ಷಿಗಳು ಸಹ ಢಾಕಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿದೆ ಎಂದು ಸಾಬೀತುಪಡಿಸಿದ್ದಾರೆ. ಶೇಖ್ ಹಾಸಿನಾ ಪ್ರತಿಭಟನೆ ಮಾಡುವವರನ್ನು ಹುಡುಕಲು ಡ್ರೋನ್‌ಗಳನ್ನು ಬಳಸುವಂತೆ ಮತ್ತು ಅವರನ್ನು ಕೊಲ್ಲಲು ಹೆಲಿಕಾಪ್ಟರ್‌ ಮತ್ತು ಮಾರಕ ಆಯುಧಗಳನ್ನು ಬಳಸುವಂತೆ ಆದೇಶಿಸಿದ್ದಾರೆ ಎಂದು ಕೋರ್ಟ್ ಹೇಳಿದೆ.

    ಮಾಜಿ ಪ್ರಧಾನಿ ಶೇಖ್ ಹಸೀನಾ ಬಾಂಗ್ಲಾದೇಶದಿಂದ ಪಲಾಯನ ಮಾಡಿ ಭಾರತದಲ್ಲಿ ಆಶ್ರಯ ಪಡೆದಿದ್ದಾರೆ. ಅಸಾದುಜ್ ಖಾನ್ ಕಮಲ್ ಸಹ ಭಾರತದಲ್ಲಿದ್ದಾರೆ ಎಂದು ಅಂದಾಜಿಸಲಾಗಿದೆ. ಸದ್ಯ ಬಾಂಗ್ಲಾದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ಇಬ್ಬರನ್ನು ಗಡಿಪಾರು ಮಾಡುವಂತೆ ಮನವಿ ಮಾಡಿದ್ದು ಭಾರತ ಸರ್ಕಾರ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search