ರಿಯಾದ್: ಉಮ್ರಾ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಒಂದು ಇಂದು ( ನವೆಂಬರ್ 17 ) ಮುಂಜಾನೆ ( ಭಾರತೀಯ ಕಾಲಮಾನದ ಪ್ರಕಾರ ಬೆಳಗ್ಗೆ 1.30 ) ಮುಹ್ರಾಸ್ ಎಂಬಲ್ಲಿ ಡೀಸೆಲ್ ಟ್ಯಾಂಕರ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತಕ್ಕೀಡಾಗಿದೆ.
ಘಟನೆಯಲ್ಲಿ ಬಸ್ ಹೊತ್ತಿ ಉರಿದಿದ್ದು, ಬಸ್‌ನಲ್ಲಿದ್ದ 42 ಮಂದಿ ಸಜೀವದಹನವಾಗಿದ್ದಾರೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿದುಬಂದಿದೆ. ಮೆಕ್ಕಾದಿಂದ ಮದೀನಾಗೆ ಯಾತ್ರಾರ್ಥಿಗಳನ್ನು ಹೊತ್ತು ಸಾಗುತ್ತಿದ್ದ ಬಸ್‌ನಲ್ಲಿ ಹೆಚ್ಚಾಗಿ ಮಹಿಳೆಯರು ಹಾಗೂ ಮಕ್ಕಳಿದ್ದರು ಎಂಬುದು ತಿಳಿದುಬಂದಿದೆ. ಮೃತರೆಲ್ಲ ಭಾರತದ ಹೈದರಾಬಾದ್ ಮೂಲದವರು ಎಂದು ತಿಳಿದುಬಂದಿದೆ.
ಇನ್ನು ಬಸ್‌ನಲ್ಲಿದ್ದವರು ಮುಂಜಾನೆಯಾದ ಕಾರಣ ಗಾಢ ನಿದ್ರೆಯಲ್ಲಿದ್ದು, 20 ಮಹಿಳೆಯರು ಹಾಗೂ 11 ಮಕ್ಕಳು ಸೇರಿದಂತೆ ಒಟ್ಟು 42 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿದ್ದು, ಅಧಿಕೃತ ಮಾಹಿತಿ ಇನ್ನೂ ಹೊರಬರಬೇಕಿದೆ. ಸದ್ಯಕ್ಕೆ ರಕ್ಷಣಾ ಕಾರ್ಯಗಳು ನಡೆಯುತ್ತಿವೆ.
ಇನ್ನು ಘಟನೆ ಸಂಬಂಧ ಸಹಾಯವಾಣಿಗಳನ್ನೂ ಸಹ ತೆರೆಯಲಾಗಿದ್ದು, 8002440003 (ಟೋಲ್‌ಫ್ರೀ), 0122614093, 0126614276, 0556122301 (ವಾಟ್ಸಪ್) ಸಂಖ್ಯೆಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.
ಇನ್ನು ಕತ್ತಲೆಯಲ್ಲಿ ಬಸ್ ಹೊತ್ತಿ ಉರಿಯುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


