Wednesday, November 4, 2026
spot_img
More
    spot_img
    HomeLatest newsಬಿಹಾರ: ನಿತಿಶ್‌ ಕುಮಾರ್‌ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ದಿನಾಂಕ ನಿಗದಿ

    ಬಿಹಾರ: ನಿತಿಶ್‌ ಕುಮಾರ್‌ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ದಿನಾಂಕ ನಿಗದಿ

    ಪಾಟ್ನಾ: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿ ವಿರೋಧ ಪಕ್ಷಗಳನ್ನು ಧೂಳೀಪಟ ಮಾಡಿರುವ ಎನ್‍ಡಿಎ, ಬಿಹಾರದಲ್ಲಿ ಇದೇ 20ರಂದು ಸರ್ಕಾರ ರಚನೆ ಮಾಡಲಿದ್ದು, ಮುಖ್ಯಮಂತ್ರಿಯಾಗಿ 10ನೇ ಬಾರಿಗೆ ನಿತೀಶ್‍ಕುಮಾರ್ ಅಧಿಕಾರ ಸ್ವೀಕರಿಸಲಿದ್ದಾರೆ.

    ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆಯಲಿರುವ ವರ್ಣರಂಚಿತ ಸಮಾರಂಭದಲ್ಲಿ ಜೆಡಿಯು ಮುಖಂಡ ನಿತೀಶ್‍ಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವರು.

    ಜೊತೆಗೆ ಬಿಜೆಪಿ ಹಾಗು ಎಲ್‍ಜೆಪಿಯಿಂದ ತಲಾ ಒಬ್ಬರು ಉಪಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

    ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರಮೋದಿ ಆಗಮಿಸಲಿದ್ದು, ಬಿಜೆಪಿ ಹಾಗೂ ಎನ್‍ಡಿಎ ಆಡಳಿತವಿರುವ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಕೂಡ ಭಾಗವಹಿಸಲಿದ್ದಾರೆ.

    ಮೂಲಗಳ ಪ್ರಕಾರ ಬಿಜೆಪಿಗೆ ಸಚಿವ ಸಂಪುಟದಲ್ಲಿ 15ರಿಂದ 16 ಸ್ಥಾನ, ಜೆಡಿಯುಗೆ 14 ಸ್ಥಾನ, ಎಲ್‍ಜೆಪಿಗೆ 3, ಆರ್‍ಎಲ್‍ಎಂ ಮತ್ತು ಎಚ್‍ಎಎಂಗೆ ತಲಾ ಒಂದು ಸ್ಥಾನ ದೊರಕುವ ಸಂಭವವಿದೆ.

    ನಿತೀಶ್‍ಕುಮಾರ್ ಅವರನ್ನೇ ಮುಂದಿನ ಮುಖ್ಯಮಂತ್ರಿ ಮಾಡಲು ಎನ್‍ಡಿಎ ಮಿತ್ರಪಕ್ಷಗಳು ಸರ್ವಸಮತದ ಒಪ್ಪಿಗೆಯನ್ನು ಸೂಚಿಸಿವೆ. ಈ ವಿಷಯದಲ್ಲಿ ಯಾವುದೇ ಒಬ್ಬ ಶಾಸಕರೂ ಕೂಡ ಅಪಸ್ವರ ತೆಗೆದಿಲ್ಲ.

    ಮಂಗಳವಾರ ಔಪಚಾರಿಕವಾಗಿ ಶಾಸಕಾಂಗ ಸಭೆ ನಡೆಯಲಿದ್ದು, ನಿತೀಶ್‍ಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಿದ್ದಾರೆ. ನಂತರ ಸರ್ಕಾರ ರಚನೆಗೆ ವಿದ್ಯುಕ್ತವಾಗಿ ಎನ್‍ಡಿಎ ಹಕ್ಕು ಮಂಡಿಸಲಿದೆ.

    20ರಂದು ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಶಾಸಕಾಂಗ ಪಕ್ಷದ ನಾಯಕರು ರಾಜ್ಯಪಾಲರಿಗೆ ಶಾಸಕರ ಬೆಂಬಲದ ಪತ್ರಗಳನ್ನು ನೀಡಲಿದ್ದಾರೆ.

    ಇದಕ್ಕೂ ಮುನ್ನ ನಿತೀಶ್‍ಕುಮಾರ್ ಅವರು ತಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಭವನಕ್ಕೆ ತೆರಳಿದ ಅವರು ರಾಜ್ಯಪಾಲ ಆರೀಫ್ ಮೊಹಮದ್ ಖಾನ್ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದರು.

    ನಿತೀಶ್‍ಕುಮಾರ್ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾದಾಗ ಹಂಗಾಮಿ ಮುಖ್ಯಮಂತ್ರಿಯಾಗಿದ್ದರು. ಈಗ ರಾಜೀನಾಮೆ ನೀಡಿರುವುದರಿಂದ ರಾಜ್ಯಪಾಲರು ವಿಧಾನಸಭೆಯನ್ನು ವಿಸರ್ಜಿಸಿ ಆದೇಶ ಹೊರಡಿಸಲಿದ್ದಾರೆ.

    ಶಾಸಕರ ಬೆಂಬಲದ ಪತ್ರವನ್ನು ನೀಡಿದ ನಂತರ ರಾಜ್ಯ ಚುನಾವಣಾ ಆಯೋಗವು ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಆಯ್ಕೆಯಾದ ಶಾಸಕರ ಪಟ್ಟಿಯನ್ನು ನೀಡಲಿದ್ದಾರೆ. ನಂತರ ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನ ಕೊಡುವರು.

    ಈಗಾಗಲೇ ಪ್ರಧಾನಿಯವರು ಕಾರ್ಯಕ್ರಮಕ್ಕೆ ಬರುವುದಾಗಿ ಸಮತಿಸಿರುವುದರಿಂದ ಇದೇ 20ರಂದು ಪಾಟ್ನಾದ ಗಾಂಧಿ ಮೈದಾನದಲ್ಲಿ ಭವ್ಯ ಸಮಾರಂಭ ಜರುಗಲಿದ್ದು, ಬಿಹಾರದಲ್ಲಿ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ನಿತೀಶ್‍ಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

    ಒಂದು ವೇಳೆ ನಿತೀಶ್‍ಕುಮಾರ್ 2030ರವರೆಗೆ ಐದು ವರ್ಷಗಳ ಕಾಲ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರೆ ಭಾರತದ ಇತಿಹಾಸದಲ್ಲೇ ಅತಿಹೆಚ್ಚು ಕಾಲ ಮುಖ್ಯಮಂತ್ರಿಯಾದ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ.

    ಅಂಧ ವನಿತೆಯರ ಟಿ20 ವಿಶ್ವಕಪ್:‌ ಪಾಕ್‌ ಆಟಗಾರ್ತಿಯರ ಕೈಕುಲುಕಿ ಕ್ರೀಡಾಸ್ಪೂರ್ತಿ ಮೆರೆದ ಭಾರತೀಯರು


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search