Tuesday, November 3, 2026
spot_img
More
    spot_img
    HomeLatest newsಬಿಹಾರ ಚುನಾವಣೆ: ಸಿಎಂಗೂ ಮೊದಲೂ ವಿರೋಧ ಪಕ್ಷದ ನಾಯಕನ ಆಯ್ಕೆ!

    ಬಿಹಾರ ಚುನಾವಣೆ: ಸಿಎಂಗೂ ಮೊದಲೂ ವಿರೋಧ ಪಕ್ಷದ ನಾಯಕನ ಆಯ್ಕೆ!

    ಬಿಹಾರ ವಿಧಾನಸಭೆ ಚುನಾವಣೆ 2025ರ ಫಲಿತಾಂಶ ಶುಕ್ರವಾರ ಪ್ರಕಟವಾಗಿದೆ. ಚುನಾವಣೆಯಲ್ಲಿ ಜೆಡಿಯು-ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 202 ಸೀಟುಗಳಲ್ಲಿ ಜಯಗಳಿಸಿದೆ. ರಾಜ್ಯದಲ್ಲಿ ಹೊಸ ಸರ್ಕಾರ ರಚನೆ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆ. ಜೆಡಿಯು ನಾಯಕ ನಿತೀಶ್ ಕುಮಾರ್ ಮತ್ತೊಂದು ಅವಧಿಗೆ ಸಿಎಂ ಆಗಿ ಮುಂದುವರೆಯಲಿದ್ದಾರೆ?.

    ಬಿಹಾರದ ಮುಖ್ಯಮಂತ್ರಿ ಯಾರು? ಎಂಬ ಕುತೂಹಲ ಇನ್ನೂ ಹಾಗೆಯೇ ಇದೆ. ಈ ನಡುವೆ ಬಿಹಾರ ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆ ನಡೆದಿದೆ. ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆಯಾಗಿದ್ದ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.

    ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಆರ್‌ಜೆಡಿ ಪಕ್ಷ 25 ಸೀಟುಗಳಲ್ಲಿ ಜಯಗಳಿಸಿತ್ತು. ಪಕ್ಷದ ನಾಯಕ ಮತ್ತು ಮಹಾಘಟಬಂಧನ್ ಮೈತ್ರಿಕೂಟದ ಸಿಎಂ ಅಭ್ಯರ್ಥಿಯಾಗಿದ್ದ ತೇಜಸ್ವಿ ಯಾದವ್ ವಿರೋಧ ಪಕ್ಷದ ನಾಯಕರಾಗಿ ಸೋಮವಾರ ಆಯ್ಕೆಯಾಗಿದ್ದು, ವಿಧಾನಸಭೆ ಅಧಿವೇಶನದಲ್ಲಿ ಈ ಕುರಿತು ಅಧಿಕೃತ ಘೋಷಣೆ ಮಾಡಬೇಕಿದೆ.

    3ನೇ ಬಾರಿಗೆ ಗೆಲುವು: ಬಿಹಾರ ವಿಧಾನಸಭಾ ಚುನಾವಣೆ 2025ಕ್ಕೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ರಾಘೋಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದರು. 1,18,597 ಮತಗಳನ್ನು ಪಡೆದ ಅವರು 14,532 ಮತಗಳ ಅಂತರದಿಂದ ಎದುರಾಳಿಯಾಗಿದ್ದ ಬಿಜೆಪಿಯ ಸತೀಶ್ ಕುಮಾರ್ (104065 ಮತ) ಸೋಲಿಸಿದ್ದಾರೆ.

    ತೇಜಸ್ವಿ ಯಾದವ್ ರಾಘೋಪುರ ಕ್ಷೇತ್ರದಿಂದ 3ನೇ ಬಾರಿಗೆ ಆಯ್ಕೆ ಬಯಸಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಕ್ಷೇತ್ರದ ಮತದಾರರು ಅವರ ನಿರೀಕ್ಷೆ ಹುಸಿ ಮಾಡಲಿಲ್ಲ. ರಾಜ್ಯದಲ್ಲಿ ಆರ್‌ಜೆಡಿ ಕಡಿಮೆ ಸ್ಥಾನಗಳನ್ನು ಗಳಿಸಿದರೂ ಸಹ ತೇಜಸ್ವಿ ಯಾದವ್ ಗೆಲ್ಲಿಸಿದ್ದಾರೆ.

    ರಾಘೋಪುರ ಕ್ಷೇತ್ರದಿಂದ ಲಾಲೂ ಪ್ರಸಾದ್ ಯಾದವ್, ರಾಬ್ರಿ ದೇವಿ ಗೆದ್ದು ಬಿಹಾರದ ಮುಖ್ಯಮಂತ್ರಿಯಾಗಿದ್ದರು. ಆದ್ದರಿಂದ ಕ್ಷೇತ್ರದ ಮೇಲೆ ಲಾಲೂ ಪ್ರಸಾದ್ ಯಾದವ್ ಕುಟುಂಬ ಉತ್ತಮ ನಂಟು ಹೊಂದಿದೆ. ಕಳೆದ ಮೂರು ಚುನಾವಣೆಗಳಿಂದ ತೇಜಸ್ವಿ ಯಾದವ್ ಕ್ಷೇತ್ರದಿಂದ ಗೆಲುವು ಸಾಧಿಸುತ್ತಿದ್ದಾರೆ.

    ಆರ್‌ಜೆಡಿ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಮೈತ್ರಿಕೂಟ ತೇಜಸ್ವಿ ಯಾದವ್ ಈ ಬಾರಿಯ ಚುನಾವಣೆಗೆ ಮೈತ್ರಿಕೂಟದ ಮುಖ್ಯಮಂತ್ತಿ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು. ಆರ್‌ಜೆಡಿ 143 ಸೀಟುಗಳಲ್ಲಿ ಚುನಾವಣೆಗೆ ಸ್ಪರ್ಧಿಸಿತ್ತು. ಆದರೆ ಗೆದ್ದಿರುವುದು 25 ಸೀಟುಗಳು ಮಾತ್ರ, ಮತಗಳಿಕೆ ಶೇ 23ರಷ್ಟು.

    ವಿರೋಧ ಪಕ್ಷಗಳಲ್ಲಿ ಕಾಂಗ್ರೆಸ್ 6, ಸಿಪಿಐ(ಎಂ) 1, ಸಿಪಿಐ(ಎಂಎಲ್)(ಎಲ್‌) 2 ಸೀಟುಗಳಲ್ಲಿ ಮಾತ್ರ ಜಯಗಳಿಸಿವೆ. ಆದ್ದರಿಂದ ವಿರೋಧ ಪಕ್ಷಗಳಲ್ಲಿ ಅತಿ ಹೆಚ್ಚು ಸೀಟು ಗೆದ್ದಿರುವ ಆರ್‌ಜೆಡಿಗೆ ವಿರೋಧ ಪಕ್ಷದ ನಾಯಕನ ಸ್ಥಾನ ಸಿಕ್ಕಿದೆ.

    ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 202 ಸೀಟುಗಳಲ್ಲಿ ಜಯಗಳಿಸಿದೆ. ಇವುಗಳಲ್ಲಿ ಬಿಜೆಪಿ 89, ಜೆಡಿಯು 85, ಎಲ್‌ಜೆಪಿ (ಆರ್‌ವಿ) 19, ಹೆಚ್‌ಎಎಂ(ಎಸ್) 5 ಮತ್ತು ಆರ್‌ಎಲ್‌ಎಂ 4 ಸೀಟುಗಳನ್ನು ಪಡೆದಿವೆ. ಬಿಜೆಪಿ ಅತಿ ಹೆಚ್ಚು ಸೀಟುಗಳಿಸಿದರೂ ಸಹ ಜೆಡಿಯು ಪಕ್ಷಕ್ಕೆ ಮುಖ್ಯಮಂತ್ರಿ ಪದವಿ ಬಿಟ್ಟುಕೊಡಲಿದೆ.

    ಹಾಲಿ ಸಿಎಂ ನಿತೀಶ್ ಕುಮಾರ್ ಸೋಮವಾರ ರಾಜಭವನಕ್ಕೆ ಭೇಟಿ ನೀಡಿ ರಾಜ್ಯಪಾಲರನ್ನು ಭೇಟಿ ಮಾಡಿದರು. ಸಚಿವ ಸಂಪುಟವನ್ನು ವಿಸರ್ಜನೆ ಮಾಡಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನವೆಂಬರ್ 20ರಂದು ಹೊಸ ಸರ್ಕಾರ ರಚನೆಯಾಗಲಿದೆ ಎಂಬ ಮಾಹಿತಿ ಸಿಕ್ಕಿದೆ.

    ನಿತೀಶ್ ಕುಮಾರ್ ಸಿಎಂ ಆಗಿ ಮುಂದುವರೆಯಲಿದ್ದಾರೆ. ಬಿಜೆಪಿ ಮತ್ತು ಎಲ್‌ಜೆಪಿ (ಆರ್‌ವಿ) ಪಕ್ಷಕ್ಕೆ ತಲಾ ಒದೊಂದು ಡಿಸಿಎಂ ಸ್ಥಾನಗಳು ಸಿಗಲಿವೆ. ಯಾವ ಪಕ್ಷಕ್ಕೆ ಎಷ್ಟು ಸಚಿವ ಸ್ಥಾನ? ಎಂಬುದು ಇನ್ನೂ ಸಹ ಅಂತಿಮವಾಗಿಲ್ಲ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search