Tuesday, November 3, 2026
spot_img
More
    spot_img
    HomeLatest newsಕರ್ನಾಟಕ ಹವಾಮಾನ: ಶೀತಗಾಳಿ ಮತ್ತು ಮಳೆ ಮುನ್ಸೂಚನೆ

    ಕರ್ನಾಟಕ ಹವಾಮಾನ: ಶೀತಗಾಳಿ ಮತ್ತು ಮಳೆ ಮುನ್ಸೂಚನೆ

    ಕರ್ನಾಟಕದಲ್ಲಿ ಮಳೆ ಅಬ್ಬರ ಕಡಿಮೆ ಆಯಿತು ಎಂದು ಜನರು ನೆಮ್ಮದಿಯಾಗಿದ್ದರು. ಆದರೆ ಈಗ ಚಳಿ ಹೆಚ್ಚಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ಮಂಗಳವಾರದ ಬಳಿಕ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.

    ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್ಎನ್‌ಡಿಎಂಸಿ) ರಾಜ್ಯದ ಮುಂದಿನ 7 ದಿನಗಳ ಮಳೆ, ಶೀತಗಾಳಿ ಮುನ್ಸೂಚನೆ, ಎಚ್ಚರಿಕೆಗಳುನ್ನು ನೀಡಿದೆ. ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಿರಲಿದೆ.

    ಮುಂದಿನ ಏಳು ದಿನಗಳ ಕಾಲ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯುವ ಸಾಧ್ಯತೆಯಿದ್ದು, ಮುಂಜಾನೆ ಚಳಿ ಹಾಗೂ ಅಲ್ಲಲ್ಲಿ ಮಂಜಿನ ವಾತಾವರಣ ಇರುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

    ನವೆಂಬರ್ 18 ರಿಂದ ದಕ್ಷಿಣ ಒಳನಾಡು, ಮಲೆನಾಡು & ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಆಧರಿಸಿ ಮಾಹಿತಿಯನ್ನು ಹಂಚಿಕೊಂಡಿದೆ.

    ನವೆಂಬರ್ 17 ರಿಂದ 23ರ ತನಕ ದಕ್ಷಿಣ ಒಳನಾಡು, ಉತ್ತರ ಒಳನಾಡು ಅಥವ ಕರಾವಳಿ ಕರ್ನಾಟಕಕ್ಕೆ ಭಾರೀ ಮಳೆಯ ಮುನ್ಸೂಚನೆ ನೀಡಿಲ್ಲ. ರೆಡ್, ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ನೀಡಿಲ್ಲ. ಆದರೆ ಮಲೆನಾಡು & ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

    ಬೆಂಗಳೂರು ನಗರದಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಆದರೆ ನಗರದಲ್ಲಿ ಸೋಮವಾರ ಮಧ್ಯಾಹ್ನ ಮೋಡ ಕವಿದ ವಾತಾವರಣವಿದ್ದು ಮುಂಜಾನೆ ಚಳಿ ಹಾಗೂ ಮಂಜಿನ ವಾತಾವರಣ ಇರುವ ನಿರೀಕ್ಷೆ ಇದೆ ಎಂದು ಮುನ್ಸೂಚನೆ ಕೊಡಲಾಗಿದೆ.

    ಸೋಮವಾರ ರಾಜ್ಯದಾದ್ಯಂತ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಮುಂಜಾನೆ ಚಳಿ ಹಾಗೂ ಅಲ್ಲಲ್ಲಿ ಮಂಜಿನ ವಾತಾವರಣ ಇರುವ ಸಾಧ್ಯತೆಯಿದೆ ಎಂದು ಹೇಳಿತ್ತು. ಆದರೆ ಮೋಡ ಕವಿದ ವಾತಾವರಣ ಇದ್ದರೂ ಸಹ ಯಾವ ಜಿಲ್ಲೆಯಲ್ಲಿಯೂ ಮಳೆಯಾಗಿಲ್ಲ.

    ರಾಜ್ಯದ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ತನಕ ತೀವ್ರ ಶೀತಗಾಳಿ ಬೀಸುವ ಎಚ್ಚರಿಕೆ ಇದೆ. ಜನರು ಸಾಮಾನ್ಯ ಮುನ್ನೆಚ್ಚರಿಕೆಗಳನ್ನು ವಹಿಸಬೇಕು ಎಂದು ತಿಳಿಸಲಾಗಿದೆ.

    ಮುಂದಿನ ಎರಡು ದಿನಗಳ ಕಾಲ ಅದರಲ್ಲೂ ಉತ್ತರ ಒಳನಾಡಿನ ಜಿಲ್ಲೆಗಳ ವ್ಯಾಪ್ತಿಯಲ್ಲಿ ಚಳಿ ಹೆಚ್ಚಾಗಿರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಮತ್ತು ಬೆಳಗಾವಿ ವಿಮಾನ ನಿಲ್ದಾಣದಲ್ಲಿ 11.6 ಡಿಗ್ರಿ ಸೆಲ್ಸಿಯಸ್, ವಿಜಯಪುರ ಮತ್ತು ಧಾರವಾಡದಲ್ಲಿ 12 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

    ಬೆಂಗಳೂರು ನಗರದಲ್ಲಿ ಮಂಗಳವಾರ ಸಹ ಬೆಳಗ್ಗೆ ಹಲವು ಪ್ರದೇಶಗಳಲ್ಲಿ ಮಂಜು ಕವಿದ ವಾತಾವರಣವಿರುತ್ತದೆ. ಎರಡು ದಿನಗಳ ಕಾಲ ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಮುನ್ಸೂಚನೆ ಕೊಡಲಾಗಿದೆ.

    ಬೆಂಗಳೂರು ನಗರದಲ್ಲಿ ಮಂಗಳವಾರ ಸಹ ಬೆಳಗ್ಗೆ ಹಲವು ಪ್ರದೇಶಗಳಲ್ಲಿ ಮಂಜು ಕವಿದ ವಾತಾವರಣವಿರುತ್ತದೆ. ಎರಡು ದಿನಗಳ ಕಾಲ ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಮುನ್ಸೂಚನೆ ಕೊಡಲಾಗಿದೆ.

    ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಕೊಡಗು, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ನವೆಂಬರ್ 18 ಮತ್ತು 19ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಒಂದೆರಡು ಕಡೆ ಹಗುರವಾಗಿ ಸಾಧಾರಣ ಮಳೆಯಾಗಲಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search