ೆಂಗಳೂರು: ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರೈತರಿಗೆ ನೀಡಬೇಕಿರುವ ಕ್ಷೀರಧಾರೆಗೆ ಹಣವಿಲ್ಲ. ಇತ್ತ ಬಡವರಿಗೂ ಉಪಕಾರಿಯಾಗಲಿಲ್ಲ. ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕನ್ನೂ ಹಸನಾಗಿಸಲಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇದುವರೆಗೂ ರಾಜ್ಯದ ರೈತರ ಹಾಲಿನ ₹606.69 ಕೋಟಿಗೂ ಹೆಚ್ಚು ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡು ಇದಕ್ಕೆ ಹಣಕಾಸಿನ ಕೊರತೆಯೇ ನೇರ ಕಾರಣ ಎಂದು ಸ್ವತಃ ಪಶುಸಂಗೋಪನಾ ಸಚಿವರೇ ಸದನದಲ್ಲಿ ತಿಳಿಸಿದ್ದಾರೆ. ಇದು ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಬೊಕ್ಕಸ ಬರಿದಾಗಿಸಿಕೊಂಡು ದಿವಾಳಿ ಅಂಚಿಗೆ ತಲುಪಿರುವುದನ್ನು ಸಾಕ್ಷೀಕರಿಸುತ್ತಿದೆ.
ಓಲೈಕೆ ರಾಜಕಾರಣಕ್ಕಾಗಿ ಶೋಷಿತರು ಹಾಗೂ ಹಿಂದುಳಿದವರಿಗೆ ಮೀಸಲಿಟ್ಟ ಹಣವನ್ನು ಅನ್ಯ ಕಾರ್ಯಗಳಿಗೆ ಬಳಸಿಕೊಂಡಿದ್ದ ಈ ಸರ್ಕಾರದಲ್ಲಿ, ರೈತರ ಪ್ರೋತ್ಸಾಹ ಧನ ಮತ್ಯಾವ ಓಲೈಕೆಗೆ ಬಳಕೆಯಾಗಿದೆಯೋ ತಿಳಿಯದು. ಅಭಿವೃದ್ಧಿ ಶೂನ್ಯ ಆಡಳಿತದ ಮೂಲಕ ರೈತರ ಶ್ರೇಯೋಭಿವೃದ್ಧಿಯೆಡೆಗೆ ಒಂದೇ ಒಂದು ಹೆಜ್ಜೆ ಇಡದ ಜನವಿರೋಧಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿದೆ. ಈ ಕೂಡಲೇ ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸುತ್ತೇನೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಇನ್ನು ರಾಜ್ಯ ಸರ್ಕಾರ ಎಲ್ಲಾ ರೀತಿಯಲ್ಲೂ ಅನ್ನದಾತರಿಗೆ ಮೋಸ ಮಾಡುತ್ತಿದೆ. ಇದರಿಂದ ರೈತರ ಗೋಳು ಹೇಳತೀರದಾಗಿದೆ. ಹೀಗಾಗಿ ರೈತರ ಪರ ಅನೇಕ ಅಭಿವೃದ್ಧಿ ಕೆಲಸಗಳನ್ನು ಜಾರಿಗೆ ತರಬೇಕು ಎಂದು ಮನವಿ ಮಾಡಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


