Monday, September 21, 2026
spot_img
More
    spot_img
    HomeTop Storyರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ: 15 ಕಡೆ ರೋಪ್‌ ವೇ ನಿರ್ಮಾಣ

    ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ: 15 ಕಡೆ ರೋಪ್‌ ವೇ ನಿರ್ಮಾಣ

    ಬೆಳಗಾವಿ: ರಾಜ್ಯದಲ್ಲಿ 15 ಕಡೆ ರೋಪ್‌ ವೇಗಳ ನಿರ್ಮಾಣಕ್ಕೆ ಸರ್ಕಾರ ತೀರ್ಮಾನ ಕೈಗೊಂಡಿದ್ದು, ನಿರ್ಮಾಣ ಹಾಗೂ ಕಾರ್ಯ ನಿರ್ವಹಣೆಯನ್ನು ಅಧಿಕೃತಗೊಳಿಸುವ ಸಲುವಾಗಿ 2024ನೇ ಸಾಲಿನ ವಿಧೇಯಕವನ್ನು ಜಾರಿಗೊಳಿಸಲಾಗುತ್ತಿದೆ ಎಂದು ಸಚಿವ ಎಚ್‌.ಕೆ.ಪಾಟೀಲ್‌ ಮಾಹಿತಿ ನೀಡಿದ್ದಾರೆ.

    Advertisement

    ಈ ಕುರಿತು ಸುವರ್ಣಸೌಧ ಕಲಾಪದಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ ವಿಧೇಯಕವನ್ನು ಮಂಡಿಸಲಾಗುತ್ತಿದ್ದು, ರೋಪ್‌ ವೇಗಳ ಸಹಾಯದಿಂದ ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ದೊರಕಲಿದೆ. ಹೀಗಾಗಿ ಸದನ ವಿಧೇಯಕ ಮಂಡನೆ ಅನುಮತಿ ನೀಡಬೇಕು ಎಂದು ಕೋರಿದ್ದಾರೆ.

    ಈ ವೇಳೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಮಾತನಾಡಿ, ವಿಧೇಯಕದ ಅಡಿ ರಚಿಸಲಾಗುವ ಸಲಹಾ ಪ್ರಾಧಿಕಾರದಲ್ಲಿ ಸರ್ಕಾರದ ಅರಣ್ಯ ಇಲಾಖೆ ಕಾರ್ಯದರ್ಶಿಗಳನ್ನು ಸಹ ಸದಸ್ಯರನ್ನಾಗಿ ನೇಮಿಸಬೇಕು. ರೋಪ್‌ ವೇ ನಿರ್ಮಿಸಲು ಉದ್ದೇಶಿಸಿದ ಹಲವು ಸ್ಥಳಗಳು ಅರಣ್ಯ ಇಲಾಖೆ ವ್ಯಾಪ್ತಿಗೆ ಬರುತ್ತವೆ. ಅದಕ್ಕೆ ಶೀಘ್ರವೇ ಅವುಗಳಿಂದ ಅನುಮತಿ ಪಡೆಯಬೇಕು ಎಂದು ಹೇಳಿದರು.

    ಬಿಜೆಪಿ ಶಾಸಕ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ್‌ ಮಾತನಾಡಿ, ರೋಪ್‌ ವೇಗಳು ಮಲೆನಾಡು ಭಾಗದಲ್ಲಿ ಗುಡ್ಡದ ಮೇಲೆ ಕಾಲುದಾರಿಗಳ ನಿರ್ಮಾಣದಿಂದ ಉಂಟಾಗುವ ಭೂ ಕುಸಿತ ತಡೆಯಲು ಸಹಾಯಕವಾಗಿವೆ ಎಂದು ಅಭಿಪ್ರಾಯ ಪಟ್ಟರು.

    ಶಾಸಕ ಅರಗ ಜ್ಞಾನೇಂದ್ರ ಮಾತನಾಡಿ, ರೋಪ್‌ ವೇಗಳ ಸುರಕ್ಷತೆ ಮತ್ತು ಗುಣಮಟ್ಟ ಪರಿಶೀಲನೆಗೆ ಸರ್ಕಾರ ವಿಧೇಯಕದಲ್ಲಿ ಅಧಿಕ ಮಹತ್ವ ನೀಡಬೇಕು ಎಂದರು.

    ಇನ್ನು ಶಾಸಕ ಎಚ್‌.ಸಿ.ಬಾಲಕೃಷ್ಣ ಮಾತನಾಡಿ, ಶ್ರವಣಬೆಳಗೊಳದಲ್ಲಿ ರೋಪ್‌ ವೇ ನಿರ್ಮಿಸಲು ಭಾರತೀಯ ಪುರಾತತ್ವ ಇಲಾಖೆ ಅನುಮತಿ ನೀಡುತ್ತಿಲ್ಲ. ಅದನ್ನು ಗಮನದಲ್ಲಿಟ್ಟುಕೊಂಡು ರೋಪ್‌ ವೇ ಅನ್ನು ನಿರ್ಮಿಸಲು ಸಲಹಾ ಪ್ರಾಧಿಕಾರದಲ್ಲಿ ಪುರಾತತ್ವ ಇಲಾಖೆಯ ಅಧಿಕಾರಿಗಳನ್ನು ಸದಸ್ಯರನ್ನಾಗಿ ನೇಮಿಸಬೇಕು ಎಂದು ಸಲಹೆ ನೀಡಿದರು.

    ಸದನದಲ್ಲಿ ಈ ಎಲ್ಲಾ ಶಾಸಕರು ನೀಡಿದ ಸಲಹೆ ಮತ್ತು ಸೂಚನೆಗಳನ್ನು ಆಧಾರಿಸಿಧ್ವನಿ ಮತದೊಂದಿಗೆ ತಿದ್ದುಪಡಿ ವಿಧೇಯಕವನ್ನು ಅಂಗೀಕಾರ ಮಾಡಲಾಯಿತು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading