ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹೊಸ ವರ್ಷದ ಸಡಗರಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಇತ್ತೀಚೆಗೆ ಗೋವಾದ ನೈಟ್‌ಕ್ಲಬ್‌ನಲ್ಲಿ ನಡೆದ ಭೀಕರ ಅಗ್ನಿ ದುರಂತದ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ, ಈ ಬಾರಿ ಸಂಭ್ರಮಾಚರಣೆಗೆ ಕಟ್ಟುನಿಟ್ಟಿನ 19 ಅಂಶಗಳ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ನ್ಯಾಷನಲ್ ರೆಸ್ಟೋರೆಂಟ್ ಅಸೋಸಿಯೇಷನ್ ಆಫ್ ಇಂಡಿಯಾ (NRAI) ಸಹಯೋಗದೊಂದಿಗೆ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಹೊಸ ವರ್ಷ ಸಂಭ್ರಮಾಚರಣೆಗೆ ಮಾರ್ಗಸೂಚಿಗಳು ಏನೇನು?
ಎಲ್ಲಾ ಕಾರ್ಯಕ್ರಮಗಳಿಗೆ ಸಂಬಂಧಪಟ್ಟ ಇಲಾಖೆಗಳಿಂದ ಅಧಿಕೃತ ಅನುಮತಿ ಪಡೆಯುವುದು ಕಡ್ಡಾಯ
ಪೊಲೀಸ್ ಇಲಾಖೆ ನಿಗದಿಪಡಿಸಿದ ಸಮಯದೊಳಗೆ ಕಾರ್ಯಕ್ರಮ ಮುಕ್ತಾಯಗೊಳಿಸಬೇಕು.
ಪರವಾನಗಿ ಇಲ್ಲದ ಹೊರಾಂಗಣ (Outdoor) ಸ್ಥಳಗಳಲ್ಲಿ ಮದ್ಯ ಸರಬರಾಜು ಮಾಡುವಂತಿಲ್ಲ.
ನಿರ್ವಕಗಳ ತೀವ್ರತೆ ನೈಟ್ ಟೈಮ್ ಜನವಸತಿ ಪ್ರದೇಶಗಳಲ್ಲಿ 45DB ಇರಬೇಕು
ಪಾರ್ಕಿಂಗ್ ಲಾಟ್, ನೆಲಮಹಡಿ ಹಾಗೂ ಟೆರೆಸ್ (Terrace) ಮೇಲೆ ಕಾರ್ಯಕ್ರಮ ಆಯೋಜಿಸುವಂತಿಲ್ಲ.
ಸ್ಥಳದ ಸಾಮರ್ಥ್ಯಕ್ಕೆ ಅನುಗುಣವಾಗಿ ಮಾತ್ರ ಪಾಸ್ ಅಥವಾ ಟಿಕೆಟ್ ವಿತರಿಸಬೇಕು.
ಪಾರ್ಕಿಂಗ್ ಮತ್ತು ಮಹಿಳೆಯರು ಇರುವ ಕಡೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸೆಕ್ಯೂರಿಟಿ ಸಿಬ್ಬಂದಿ ನೇಮಿಸಬೇಕು.
ಭದ್ರತಾ ಏಜೆನ್ಸಿಗಳು ಕಡ್ಡಾಯವಾಗಿ ‘PSARA’ ಅಡಿಯಲ್ಲಿ ನೋಂದಣಿಯಾಗಿರಬೇಕು.
ಪಾರ್ಟಿ ಸ್ಥಳದಲ್ಲಿ ಕೆಲಸ ಮಾಡುವ ಎಲ್ಲಾ ಸಿಬ್ಬಂದಿಗಳ ಅಧಿಕೃತ ಗುರುತಿನ ಚೀಟಿ ಹೊಂದಿರಬೇಕು.
ಮಾದಕ ವಸ್ತು ಬಳಕೆ ಕಂಡುಬಂದಲ್ಲಿ ಕೂಡಲೇ ಪೊಲೀಸರಿಗೆ ತಿಳಿಸಬೇಕು. ಪೊಲೀಸರ ದಾಳಿ ವೇಳೆ ಡ್ರಗ್ಸ್ ಪತ್ತೆಯಾದರೆ ಮಾಲೀಕರು/ಮ್ಯಾನೇಜರ್ ಮೇಲೆ ಕೇಸ್ ದಾಖಲಾಗುತ್ತದೆ
ಸಾರ್ವಜನಿಕರ ವಾಹನಗಳಿಗೆ ಆಯೋಜಕರೇ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು.
ಕಾರ್ಯಕ್ರಮದ ದೃಶ್ಯಗಳನ್ನು ಸಾರ್ವಜನಿಕ ರಸ್ತೆಯಲ್ಲಿ ಕಾಣುವಂತೆ ದೊಡ್ಡ ಸ್ಕ್ರೀನ್‌ಗಳಲ್ಲಿ ಹಾಕುವಂತಿಲ್ಲ
ಕಾರ್ಯಕ್ರಮದ ಸ್ಥಳದಲ್ಲಿ ಧೂಮಪಾನಕ್ಕೆ ಅವಕಾಶ ನೀಡಬಾರದು
NO SMOKING/ NO DRUGS ಫಲಕಗಳನ್ನ ಅಳವಡಿಸಬೇಕು
ಪಾರ್ಕಿಂಗ್ ಸ್ಥಳ ಮತ್ತು ಮಹಿಳೆಯರಿರುವ ಸ್ಥಳಗಳ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಖಾಸಗಿ ಭದ್ರತಾ ಸಿಬ್ಬಂದಿ ನೇಮಿಸಬೇಕು
ಕಾರ್ಯಕ್ರಮದ ವೇಳೆ ಪಟಾಕಿ ಸಿಡಿಸುವುದನ್ನ ಸಂಪೂರ್ಣವಾಗಿ ನಿಷೇಧಿಸಿದೆ.
ಅಗ್ನಿ ನಂದಿಸುವ ವಸ್ತುಗಳನ್ನ ಅಳವಡಿಸಿಕೊಳ್ಳಬೇಕು, ನಿರ್ಗಮನ ದ್ವಾರಗಳು ದೊಡ್ಡದಾಗಿರಬೇಕು
ಸೆಕ್ಯೂರಿಟಿ ಸಿಬ್ಬಂದಿ ಹಾಗೂ ಬೌನ್ಸರ್‌ಗಳನ್ನು ನಿಯೋಜಿಸಿ ಕೊಳ್ಳುವ ಏಜೆನ್ಸಿಗಳು ‘PSARA’ ದಲ್ಲಿ ನೊಂದಣಿ ಮಾಡಬೇಕು
ಕಾಲ್ತುಳಿತ ಪ್ರಕರಣ ಆಗದಂತೆ ನೋಡಿಕೊಳ್ಳಬೇಕು
ಆರೋಗ್ಯದ ಖಜಾನೆ ಕೆಂಪು ಬಾಳೆಹಣ್ಣು: ಇಮ್ಯೂನಿಟಿ ವೃದ್ಧಿಗೆ ರಾಮಬಾಣ!
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


