ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ.
ಗೃಹಲಕ್ಷ್ಮೀ ಯೋಜನೆ ಹಣದ ಗೊಂದಲದ ವಿಚಾರವಾಗಿ ಸದನದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ನಾನು ಏನು ಹೇಳಿದ್ದೇನೆ ಅದಕ್ಕೆ ಈಗಲೂ ಬದ್ಧನಾಗಿದ್ದೇನೆ. ಆಗಸ್ಟ್ ತಿಂಗಳವರೆಗೆ ಗೃಹಲಕ್ಷ್ಮೀ ಹಣ ಫಲಾನುಭವಿಗಳ ಖಾತೆಗೆ ಜಮೆ ಆಗಿದೆ ಎಂದು ಹೇಳಿದರು.
ಗೃಹಲಕ್ಷ್ಮೀಯರಿಗೆ 23 ಕಂತುಗಳ ಹಣ ಪಾವತಿ ಮಾಡಿದ್ದೇನೆ. ಕಳೆದ ಆಗಸ್ಟ್ವರೆಗೆ 46 ಸಾವಿರ ಕೋಟಿ ಹಣ ಪಾವತಿಯಾಗಿದೆ. ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೇ ನೇರವಾಗಿ ಗೃಹಲಕ್ಷ್ಮೀಯರ ಖಾತೆಗೆ ಹಣ ಜಮೆಯಾಗಿದೆ ಎಂದು ಹೇಳಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


