Monday, March 30, 2026
spot_img
More
    spot_img
    HomeLatest newsಮಲೆ ಮಹದೇಶ್ವರ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಸೇರಿ ಹಲವಾರು ದೇವಾಲಯಗಳ ವಿಧೇಯಕಗಳಿಗೆ ಅಧಿವೇಶನದಲ್ಲಿ ಅನುಮೋದನೆ

    ಮಲೆ ಮಹದೇಶ್ವರ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಸೇರಿ ಹಲವಾರು ದೇವಾಲಯಗಳ ವಿಧೇಯಕಗಳಿಗೆ ಅಧಿವೇಶನದಲ್ಲಿ ಅನುಮೋದನೆ

    ಬೆಳಗಾವಿ: ಪ್ರಸಕ್ತ 2025 ನೇ ಸಾಲಿನ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರ (ತಿದ್ದುಪಡಿ)ವಿಧೇಯಕ, 2025 ಸಾಲಿನ ಚಂದ್ರಗುತ್ತಿ ರೇಣುಕಾಂಬ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರ ವಿಧೇಯಕ, 2025 ಸಾಲಿನ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮತ್ತು ಕೆಲವು ಇತರ ಕಾನೂನುಗಳ (ತಿದ್ದುಪಡಿ) ವಿಧೇಯಕ ಹಾಗೂ 2025 ನೇ ಸಾಲಿನ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಇಂದು ಅನುಮೋದನೆ ದೊರೆಯಿತು. ಶಾಸನ ರಚನಾ ಕಲಾಪದಲ್ಲಿ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಪರ್ಯಾಲೋಚಿಸಿದ ಈ 4 ವಿಧೇಯಕಗಳಿಗೆ ವಿಧಾನಸಭೆ ಧ್ವನಿಯಲ್ಲಿ ಧ್ವನಿ ಮತದ ಅಂಗೀಕಾರ ದೊರೆಯಿತು.

    ಮಲೈ ಮಾದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ತಿದ್ದುಪಡಿ ವಿಧೇಯಕವು ಚಾಲ್ತಿಯಲ್ಲಿರುವ ಶಾಸನಬದ್ಧ ಮತ್ತು ಆಡಳಿತಾತ್ಮಕ ಮಾನದಂಡಗಳಿಗೆ ಅನುಗುಣವಾಗಿ ಅಸ್ತಿತ್ವದಲ್ಲಿರುವ ಶಾಸನಬದ್ಧ ಮತ್ತು ಆಡಳಿತಾತ್ಮಕ ಮಾನದಂಡಗಳಿಗೆ ಅನುಗುಣವಾಗಿ ಅಸ್ತಿತ್ವದಲ್ಲಿರುವ ನೀತಿ ಕಾರ್ಯ ವಿಧಾನಗಳನ್ನು ಪರಿಶೀಲಿಸಲು ಮತ್ತು ಪರಿಷ್ಕರಿಸಲು ಅವಕಾಶ‌ ಮಾಡಿಕೊಡಲಿದೆ.

    ಪ್ರಾಧಿಕಾರದ ಸುಗಮ ಕಾರ್ಯ ನಿರ್ವಣೆಗಾಗಿ ಜಿಲ್ಲಾ ಮತ್ತು ರಾಜ್ಯಮಟ್ಟದ ಸಮಿತಿಗಳನ್ನು ರಚಿಸಲು ಹಾಗೂ ನಿರ್ಧಾರ ಕೈಗೊಳ್ಳುವಿಕೆ ಉತ್ತಮ ಯೋಜನೆ ಸಮನ್ವಯ ವೃದ್ಧಿಯನ್ನು ಸುಗಮಗೊಳಿಸಲು ಮತ್ತು ಸಾಂಸ್ಕೃತಿಕ ಹೊಣೆಗಾರಿಕೆಯನ್ನು ಖಚಿತಪಡಿಸಲು ಅವಕಾಶ ಕಲ್ಪಿಸಲಿದೆ.

    ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಮತ್ತು ನಿರ್ವಹಿಸಲು ಸ್ವತಂತ್ರ ಶಾಸನಬದ್ಧ ಪ್ರಾಧಿಕಾರ ರಚನೆಗೆ ಈ ತಿದ್ದುಪಡಿ ವಿಧೇಯಕ ಅವಕಾಶ ಕಲ್ಪಿಸಲಿದೆ.

    ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಯ ಎ-ದರ್ಜೆಯ ಹಿರಿಯ ಶ್ರೇಣಿ ಅಧಿಕಾರಿಯನ್ನು ಪ್ರಾಧಿಕಾರಗಳ ಕಾರ್ಯದರ್ಶಿಯಾಗಿ ನೇಮಿಸಲು ಅನುವು ಮಾಡಿಕೊಡುವ ವಿಧೇಯಕವಾಗಿದೆ.

    ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಅಧಿನಿಯಮ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ, ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ, ಹಾಗೂ ಹುಲಿಗೆಮ್ಮ ದೇವಿ ಕ್ಷೇತ್ರ ಪ್ರಾಧಿಕಾರ ಅಭಿವೃದ್ಧಿ ಅಧಿನಿಯಮಗಳಿಗೆ ತಿದ್ದುಪಡಿ ತರಲಾಗಿದೆ.

    ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಅಧಿನಿಯಮಕ್ಕೆ ಸಂಬಂಧಿಸಿದಂತೆ ತಾರತಮ್ಯದ ಉಪಬಂಧವನ್ನು ರದ್ದುಗೊಳಿಸುವ ಸಂಬಂಧದಲ್ಲಿ ಮತ್ತಷ್ಟು ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿ, ಈ ವಿಧೇಯಕ ತರಲಾಗಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬಿಗ್ ನ್ಯೂಸ್! ಬೆಂಗಳೂರು ಕರಗ ಉತ್ಸವಕ್ಕೆ ಸಜ್ಜು—1000ಕ್ಕೂ ಹೆಚ್ಚು ಪೊಲೀಸರ ಬಿಗಿ ಭದ್ರತೆ, ₹1.70 ಕೋಟಿ ವೆಚ್ಚ!

    “ಬೆಂಗಳೂರು ಕರಗ ಉತ್ಸವ 2026” ಮತ್ತೆ ನಗರಕ್ಕೆ ಸಾಂಸ್ಕೃತಿಕ ಸಂಭ್ರಮ ತರಲು ಸಜ್ಜಾಗಿದೆ! ಏಪ್ರಿಲ್ 1ರಂದು ನಡೆಯಲಿರುವ ಈ ಐತಿಹಾಸಿಕ ಉತ್ಸವಕ್ಕಾಗಿ ಭರ್ಜರಿ ಸಿದ್ಧತೆಗಳು ನಡೆಯುತ್ತಿದ್ದು, ಭದ್ರತೆ ಮತ್ತು ವ್ಯವಸ್ಥೆಗಾಗಿ ಸರ್ಕಾರದಿಂದ ವಿಶೇಷ...

    ಬ್ರೇಕಿಂಗ್ರಾ! ಮನವಮಿ ಹಬ್ಬಕ್ಕೆ ಮಾರುಕಟ್ಟೆ ಬಂದ್ ಆಗುತ್ತಾ? ಹೂಡಿಕೆದಾರರಿಗೆ ಕ್ಲಿಯರ್ ಮಾಹಿತಿ!

    “ಸ್ಟಾಕ್ ಮಾರ್ಕೆಟ್ ಹಾಲಿಡೇ 2026” ಇದೀಗ ಹೂಡಿಕೆದಾರರಲ್ಲಿ ದೊಡ್ಡ ಗೊಂದಲ ಮೂಡಿಸಿದೆ. ರಾಮನವಮಿ ಹಬ್ಬದ ಹಿನ್ನೆಲೆಯಲ್ಲಿ ಗುರುವಾರ ಅಥವಾ ಶುಕ್ರವಾರ ಷೇರು ಮಾರುಕಟ್ಟೆ ಬಂದ್ ಆಗುತ್ತದೆಯಾ? ಎಂಬ ಪ್ರಶ್ನೆ ಟ್ರೇಡರ್‌ಗಳ ನಡುವೆ ಭಾರೀ...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading