ಹುಣಸೂರು: ಚಾಲಕನ ನಿಯಂತ್ರಣ ತಪ್ಪಿ ಅಪೆ ಆಟೋವೊಂದು ಕೆರೆಗೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.
ಹುಣಸೂರು ತಾಲ್ಲೂಕಿನ ಮೂಕನಹಳ್ಳಿ ಬಳಿ ಈ ಘಟನೆ ನಡೆದಿದ್ದು, ಉದ್ದೂರು ಗ್ರಾಮದ ರಾಜು ಎಂಬುವವರೇ ಮೃತ ಚಾಲಕನಾಗಿದ್ದಾರೆ. ಚಾಲನೆಯಲ್ಲಿದ್ದ ಆಟೊ ಕೆರೆಗೆ ಬಿದ್ದಿದ್ದು, ಬಳಿಕ ಆಟೊ ಬಾಗಿಲು ತೆರೆಯಲಾಗದೇ ಚಾಲಕ ಪರದಾಡಿ ಪ್ರಾಣಬಿಟ್ಟಿದ್ದಾರೆ.
ಆಟೋ ಸಹಿತ ಚಾಲಕ ರಾಜು ಶವವನ್ನು ಅಗ್ನಿಶಾಮಕ ಸಿಬ್ಬಂದಿ ಮೇಲೆತ್ತಿದ್ದಾರೆ. ಈ ಸಂಬಂಧ ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


