ಕೊಡಗು: ಸೋಮವಾರಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಫೀಡರ್ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸೋಮವಾರಪೇಟೆಯ ಬಿಳಿರೆಕೊಪ್ಪ, ಮಟ್ನಳ್ಳಿ, ಕಿಬ್ಬೆಟ್ಟ, ಅಯ್ಯಪ್ಪ ಕಾಲೋನಿ, ದೊಡ್ಡಹನಕೋಡು, ಗೆಜ್ಜಹನಕೋಡು, ಕಾಡುಮನೆ, ಚಿಕ್ಕತೊಳೂರು, ಕಾಗಡಿಕಟ್ಟೆ, ದೊಡ್ಡಮಳ್ತೆ, ಒಳಗುಂದ, ಸುಳಿಮಳ್ತೆ, ಹೊನ್ನಾವಳ್ಳಿ, ಕೂಗೆಕೋಡಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. ೭
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


