ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್‌ನಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿನಿಂದ ಕೋರ್ಟ್‌ನಲ್ಲಿ ಟ್ರಯಲ್ ಆರಂಭವಾಗಿದೆ.
ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ಇಂದಿನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಕುರಿತು ಟ್ರಯಲ್ ಆರಂಭವಾಗಿದ್ದು, ಆರೋಪಿಗಳು, ಸಾಕ್ಷಿಗಳು ಹಾಗೂ ರೇಣುಕಾಸ್ವಾಮಿ ಪೋಷಕರ ವಿಚಾರಣೆ ನಡೆದಿದೆ.
ಟ್ರಯಲ್ ವಿಚಾರಣೆಗೆ ಆರೋಪಿ ನಟ ದರ್ಶನ್ ಹಾಗೂ ಏಳು ಜನ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು.
ದರ್ಶನ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡನೆ ಮಾಡಿದ್ದು, ಪ್ರಾಸಿಕ್ಯೂಷನ್ ಪರ ಹಿರಿಯ ವಕೀಲ ಪ್ರಸನ್ನಕುಮಾರ್ ವಾದ ಮಂಡಿಸಿದರು.
ಕೋರ್ಟ್‌ಗೆ ಹಾಜರಾಗಿದ್ದ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಹಾಗೂ ತಾಯಿ ರತ್ನಪ್ರಭ ಅವರ ಹೇಳಿಕೆಯನ್ನು ಮುಚ್ಚಿದ ಕೊಠಡಿಯಲ್ಲಿ ಇನ್ ಕ್ಯಾಮರಾ ಮೂಲಕ ದಾಖಲಿಸಲಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


