ಕೋಲ್ಕತ್ತಾ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಆರ್‌ಜಿಕರ್ ಮೆಡಿಕಲ್ ಕಾಲೇಜು ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಸಂಜಯ್ ರಾಯ್‌ನನ್ನು ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.
ಕೋಲ್ಕತ್ತಾ ಸೆಷನ್ ಕೋರ್ಟ್ ನ್ಯಾಯಾಧೀಶ ಅನಿರ್ಬನ್ ದಾಸ್ ಇಂದು ತೀರ್ಪು ಪ್ರಕಟಿಸಿದ್ದಾರೆ.
ಅತ್ಯಾಚಾರ, ಕೊಲೆ ಸೆಕ್ಷನ್‌ಗಳಲ್ಲಿ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದ್ದು, ಸೋಮವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ.
ಈ ಮೂಲಕ ವಿಚಾರಣೆ ನಡೆಸಿದ 57 ದಿನಗಳಲ್ಲಿ ಕೋರ್ಟ್ ತೀರ್ಪು ಪ್ರಕಟಿಸಿರುವುದು ವಿಶೇಷವೆನಿಸಿದೆ.
ಕಳೆದ ಆಗಸ್ಟ್.9ರಂದು ಬೆಳಿಗ್ಗೆ ಸ್ನಾತಕೋತ್ತರ ತರಬೇತಿ ನಿರತ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ರೀತಿಯಲ್ಲಿ ಪತ್ತೆಯಾಗಿತ್ತು. ಬಳಿಕ ಕೃತ್ಯ ನಡೆಸಿದ್ದ ಆರೋಪಿ ಸಂಜಯ್‌ನನ್ನು ಪೊಲೀಸರು ಬಂಧಿಸಿದ್ದರು.
ಈ ಪ್ರಕರಣ ನಡೆದ ಬಳಿಕ ದೇಶವ್ಯಾಪಿ ಪ್ರತಿಭಟನೆ ನಡೆದಿತ್ತು. ಕೊನೆಗೆ ಈ ಪ್ರಕರಣವನ್ನು ಸಿಎಂ ಮಮತಾ ಬ್ಯಾನರ್ಜಿ ಅವರು ಸಿಬಿಐಹೆ ಒಪ್ಪಿಸಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಅತ್ಯಾಚಾರ ನಡೆದಿದ್ದು ದೃಢ ಎಂದು ಚಾರ್ಜ್‌ಶೀಟ್ ಸಲ್ಲಿಸಿತ್ತು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


