ಈ ಬಾರಿಯ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ತಂಡದಲ್ಲಿ ಒಟ್ಟು 15 ಆಟಗಾರರು ಸ್ಥಾನ ಪಡೆದುಕೊಂಡಿದ್ದಾರೆ. ರೋಹಿತ್ ಶರ್ಮಾ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದು, ಶುಭ್‌ಮನ್ ಗಿಲ್ ಉಪನಾಯಕನಾಗಿದ್ದಾರೆ.
ಬಿಸಿಸಿಐ ಪ್ರಕಟಿಸಿರುವ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶುಬ್‌ಮನ್ ಗಿಲ್ (ಉಪನಾಯಕ), ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್, ವೈ ಜೈಸ್ವಾಲ್, ರಿಷಭ್ ಪಂತ್ ಮತ್ತು ರವೀಂದ್ರ ಜಡೇಜಾ.
ಇನ್ನು ಟೂರ್ನಿ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ಫೆಬ್ರವರಿ 19 ನಡೆಯಲಿರುವ ಪಂದ್ಯದ ಮೂಲಕ ಆರಂಭಗೊಳ್ಳಲಿದ್ದು, ಭಾರತ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನವನ್ನು ಫೆಬ್ರವರಿ 23ರಂದು ಎದುರಿಸಲಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


