ಬೆಳಗಾವಿ: ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಂಣ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಸಚಿವರಿಗೆ ಖಡಕ್ ಸೂಚನೆ ನೀಡಿದ್ದಾರೆ.
ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಮಗೆ ಕೊಟ್ಟ ಕೆಲಸ ಮೊದಲು ಮಾಡಿ, ಯಾವಾಗ ಏನು ಮಾಡಬೇಕು ಎಂಬುದು ಹೈಕಮಾಂಡ್‌ಗೆ ಗೊತ್ತಿದೆ ಎಂದರು.
ಕೆಲವರು ಹೇಳಿದ್ದಾರೆ, ಆ ಪ್ರಕಾರ ಹೈಕಮಾಂಡ್ ನಡೆಯೋದಿಲ್ಲ ಅಲ್ವಾ, ಎಲ್ಲರೂ ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ, ಯಾವಾಗ ಏನು ನಿರ್ಣಯ ತೆಗೆದುಕೊಳ್ಳಬೇಕು ಅದು ನಮಗೆ ಬಿಟ್ಟಿದ್ದು, ಇದೆಲ್ಲಾ ಮಾತನಾಡುವುದು ಪ್ರಯೋಜನಕ್ಕೆ ಬರುವುದಿಲ್ಲ. ಇದನ್ನೆಲ್ಲಾ ನೋಡಿಕೊಳ್ಳಲು ಹೈಕಮಾಂಡ್ ಇದೆ. ಜೊತೆಗೆ ನಾವೆಲ್ಲಾ ಇದ್ದೇವೆ. ನಾವು ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನೀವು ಹೇಳಿದಾಗ ಬದಲಾವಣೆ ಮಾಡಲು ಆಗಲ್ಲ. ಹೈಕಮಾಂಡ್ ಯಾವಾಗ ನಿರ್ಣಯ ತೆಗೆದುಕೊಳ್ಳಬೇಕು ಆಗ ತೆಗೆದುಕೊಳ್ಳುತ್ತದೆ. ಈ ರೀತಿ ಹೇಳಿಕೆ ನೀಡಬೇಡಿ. ಇದರಿಂದ ಪಕ್ಷಕ್ಕೆ ಹೆಚ್ಚಿನ ಹಾನಿಯಾಗುತ್ತದೆ. ದಯವಿಟ್ಟು ಯಾವುದೇ ಕಾಂಟ್ರವರ್ಸಿ ರಾಜ್ಯದಲ್ಲಿ ನಡೆಯಬಾರದು ಎಂದು ಎಚ್ಚರಿಕೆ ನೀಡಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


