ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್‌ನ ಪ್ರಭಾವಿ ನಾಯಕರಾಗಿರುವ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪ್ರೇರಿತ ಪಿತೂರಿ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಈ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಭಾಗಿಯಾಗಿಲ್ಲ. ಕಾಂಗ್ರೆಸ್ ಪಕ್ಷ ಮುಗಿಸಲು ವಿರೋಧಿಗಳಿಂದ ಈ ರೀತಿಯ ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿದರು.
ಪ್ರಕರಣದ ತನಿಖೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಭ್ರಷ್ಟಚಾರ ನಡೆದಿದೆಯೇ ಅಥವಾ ಇಲ್ಲವೇ ಎಂಬುದನ್ನು ನ್ಯಾಯಾಲಯ ವಿಚಾರಣೆ ಮಾಡಬೇಕೆ ಹೊರತು ನಾವು- ನೀವಲ್ಲ. ಇ.ಡಿ ತನಿಖೆಯನ್ನು ನಾನು ನೋಡಿದ್ದೇನೆ. ಇದರ ಕುರಿತು ಹೆಚ್ಚು ಮಾತನಾಡುವುದಿಲ್ಲ ಎಂದರು.
ಯಾರು ಏನೇ ಮಾಡಿದರೂ ಸಿಎಂ ಸಿದ್ದರಾಮಯ್ಯರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯರ ಏಳಿಗೆ ನೋಡಿ ಸಹಿಸಲು ಆಗುತ್ತಿಲ್ಲ. ಹಾಗಾಗಿ ಈ ರೀತಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


