ಬೆಂಗಳೂರು: ಹೆಚ್ಚುವರಿ ಅನುದಾನಕ್ಕೆ ಪದೇ ಪದೇ ಬೇಡಿಕೆ ಇಡುತ್ತಿದ್ದ ಶಾಸಕರನ್ನು ಸಮಾಧಾನ ಮಾಡಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದು, ಗ್ರಾಮೀಣ ಭಾಗದ ವಿಧಾನಸಭಾ ಕ್ಷೇತ್ರಗಳಿಗೆ ತಲಾ 10 ಕೋಟಿ ರೂ ಬಿಡುಗಡೆ ಮಾಡಿದ್ದಾರೆ.
2024-25ನೇ ಸಾಲಿನಲ್ಲಿ ರಾಜ್ಯದಲ್ಲಿ ಸುರಿದ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಸೇತುವೆ ಹಾಗೂ ಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲು ರಾಜ್ಯದ ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಿಗೆ ಸರ್ಕಾರದಿಂದ ತಲಾ 10 ಕೋಟಿ ರೂ ಹಣ ಬಿಡುಗಡೆ ಮಾಡಲಾಗಿದೆ.
ಗ್ರಾಮೀಣ ಭಾಗದ 189 ವಿಧಾನಸಭಾ ಕ್ಷೇತ್ರಗಳಲ್ಲಿ ರಸ್ತೆಗಳು ತೀವ್ರ ಹಾನಿಯಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ರಸ್ತೆಗಳ ಸುಧಾರಣೆಗಾಗಿ ರಾಜ್ಯದ 189 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಿಗೆ ತಲಾ 10 ಕೋಟಿಗಳಂತೆ ಒಟ್ಟು 1890 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದೆ.
ಇನ್ನು ಮಳೆ ಹಾನಿಗೆ ಒಳಗಾದ ರಸ್ತೆ ಸೇತುವೆ ಹಾಗೂ ಚರಂಡಿ ಕಾಮಗಾರಿ ಕೈಗೊಳ್ಳಲು ಹಣ ಬಿಡುಗಡೆ ಮಾಡಲಾಗಿದ್ದು, ನಿಗದಿತ ಕಾಮಗಾರಿಗಳಿಗಷ್ಟೇ ಬಳಸುವಂತೆ ಸೂಚನೆಯನ್ನು ಸಹ ನೀಡಲಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


