Saturday, September 5, 2026
spot_img
More
    spot_img
    HomeLatest newsಪಂಜಾಬ್ ಅಂಡ್ ಸಿಂಧ್ ಬ್ಯಾಂಕ್‌ನಲ್ಲಿರುವ 110 ಹುದ್ದೆಗೆ ಅರ್ಜಿ ಆಹ್ವಾನ;ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

    ಪಂಜಾಬ್ ಅಂಡ್ ಸಿಂಧ್ ಬ್ಯಾಂಕ್‌ನಲ್ಲಿರುವ 110 ಹುದ್ದೆಗೆ ಅರ್ಜಿ ಆಹ್ವಾನ;ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

    ಪಂಜಾಬ್ ಅಂಡ್‌ ಸಿಂದ್‌ ಬ್ಯಾಂಕ್‌ 110 ಲೋಕಲ್ ಬ್ಯಾಂಕ್‌ ಆಫೀಸರ್ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.ಈ ಹುದ್ದೆಗಳಿಗೆ ಯಾವುದೇ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಗೆ ಫೆಬ್ರುವರಿ 28, 2025 ರವರೆಗೆ ಅವಕಾಶ ನೀಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು, ಇನ್ನಷ್ಟು ಮಾಹಿತಿಗಳನ್ನು ಕೆಳಗಿನಂತೆ ತಿಳಿದುಕೊಳ್ಳಿ.

    Advertisement

    ಉದ್ಯೋಗ ಬ್ಯಾಂಕ್ : ಪಂಜಾಬ್ ಅಂಡ್‌ ಸಿಂದ್‌ ಬ್ಯಾಂಕ್‌

    ಹುದ್ದೆ ಹೆಸರು : ಲೋಕಲ್ ಬ್ಯಾಂಕ್ ಆಫೀಸರ್ (ಸ್ಥಳೀಯ ಬ್ಯಾಂಕ್‌ ಅಧಿಕಾರಿ)

    ಹುದ್ದೆಗಳ ಸಂಖ್ಯೆ : 110

    ಪಂಜಾಬ್ ಅಂಡ್‌ ಸಿಂದ್‌ ಬ್ಯಾಂಕ್‌’ನ ಸ್ಥಳೀಯ ಬ್ಯಾಂಕ್‌ ಅಧಿಕಾರಿ ಹುದ್ದೆಗೆ ವೇತನ ಶ್ರೇಣಿ: ರೂ.48,480-85,920.

    ಆಯ್ಕೆ ಪ್ರಕ್ರಿಯೆ:-ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಲಾಗುವುದು.

    ಯಾವ ರಾಜ್ಯದಲ್ಲಿ ಎಷ್ಟು ಹುದ್ದೆ ನೇಮಕಾತಿ

    ಅರುಣಾಚಲ ಪ್ರದೇಶ- 5
    ಅಸ್ಸಾಂ – 10
    ಗುಜರಾತ್​ – 30
    ಕರ್ನಾಟಕ -10
    ಮಹಾರಾಷ್ಟ್ರ – 30
    ಪಂಜಾಬ್​​ – 25

    ಪಂಜಾಬ್ ಅಂಡ್‌ ಸಿಂದ್‌ ಬ್ಯಾಂಕ್‌ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆಯ ದಿನಾಂಕಗಳು

    ಆನ್‌ಲೈನ್‌ ರಿಜಿಸ್ಟ್ರೇಷನ್‌ ಪಡೆಯಲು ಆರಂಭಿಕ ದಿನಾಂಕ : 07-02-2025

    ಆನ್‌ಲೈನ್‌ ರಿಜಿಸ್ಟ್ರೇಷನ್‌ ಪಡೆಯಲು ಕೊನೆ ದಿನಾಂಕ : 28-02-2025

    ಅರ್ಜಿ ಪ್ರಿಂಟ್ ತೆಗೆದುಕೊಳ್ಳಲು ನಿಗದಿತ ದಿನಾಂಕ: ಮಾರ್ಚ್‌ 15, 2025

    ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

    ಆಧಾರ್ ಕಾರ್ಡ್,ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ,ಹುದ್ದೆಗೆ ನಿಗದಿತ ವಿದ್ಯಾರ್ಹತೆ ದಾಖಲೆಗಳು,ಬೇಸಿಕ್‌ ವಿವರಗಳು ಹಾಗೂ ವೈಯಕ್ತಿಕ ವಿವರಗಳು,ಇಮೇಲ್ ವಿಳಾಸ,ಮೊಬೈಲ್ ನಂಬರ್,ಇತರೆ ಮಾಹಿತಿಗಳು

    ವಿದ್ಯಾರ್ಹತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.

    ಅರ್ಜಿ ಶುಲ್ಕ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್​ ಅಭ್ಯರ್ಥಿಗಳಿಗೆ 850 ರೂ. ಹಾಗೂ ಪ.ಜಾ, ಪ.ಪಂ ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ.

    ಪಂಜಾಬ್ ಅಂಡ್ ಸಿಂದ್ ಬ್ಯಾಂಕ್ ಹುದ್ದೆಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬಹುದು:

    ವೆಬ್‌ಸೈಟ್‌ಗೆ ಭೇಟಿ ನೀಡಿ – IBPS Online Portalಗೆ ಹೋಗಿ.

    ಹೊಸ ರಿಜಿಸ್ಟ್ರೇಷನ್ ಮಾಡುವುದು – ‘Click Here For New Registration’ ಕ್ಲಿಕ್ ಮಾಡಿ.

    ಅಗತ್ಯ ಮಾಹಿತಿಗಳನ್ನು ನಮೂದಿಸಿ – ಬೇಸಿಕ್ ಹಾಗೂ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ.

    ಅರ್ಜಿ ಸಲ್ಲಿಸಿ – ಫಾರ್ಮ್ ತುಂಬಿ, ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ, ಮತ್ತು ಅರ್ಜಿ ಶುಲ್ಕ ಪಾವತಿಸಿ.

    ಪ್ರಿಂಟ್ ತೆಗೆದುಕೊಳ್ಳಿ – ನಿಮ್ಮ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು, ಮಾರ್ಚ್ 15, 2025ರ ಒಳಗಾಗಿ ಪ್ರಿಂಟ್ ತೆಗೆದುಕೊಳ್ಳಿ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading