Tuesday, August 11, 2026
spot_img
More
    spot_img
    HomeChampions Trophy 2025Champions Trophy 2025: ಭಾರತದ ಜೆರ್ಸಿ ಮೇಲೆ ಪಾಕಿಸ್ತಾನದ ಹೆಸರು!

    Champions Trophy 2025: ಭಾರತದ ಜೆರ್ಸಿ ಮೇಲೆ ಪಾಕಿಸ್ತಾನದ ಹೆಸರು!

    ನಾಳೆಯಿಂದ (ಫೆಬ್ರವರಿ 19) ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್‌ ತಂಡಗಳು ಮುಖಾಮುಖಿಯಾಗಲಿವೆ.

    Advertisement

    ಇನ್ನು ಈ ಬಾರಿಯ ಚಾಂಪಿಯನ್ಸ್‌ ಟ್ರೋಫಿಯ ಆತಿಥ್ಯವನ್ನು ಪಾಕಿಸ್ತಾನ ವಹಿಸಿಕೊಂಡಿದ್ದು, ಎಂದಿನಂತೆ ಈ ಟೂರ್ನಿಗೂ ಸಹ ಭದ್ರತೆಯ ಕಾರಣವನ್ನು ನೀಡಿ ಪಾಕ್‌ಗೆ ತೆರಳುವುದಿಲ್ಲ ಎಂಬ ನಿಲುವನ್ನು ಭಾರತ ತಂಡ ತೆಗೆದುಕೊಂಡಿತು.

    ಹಲವು ಚರ್ಚೆ ಹಾಗೂ ವಾದ ವಿವಾದಗಳ ಬಳಿಕ ಅಂತಿಮವಾಗಿ ಹ್ರೈಬ್ರಿಡ್‌ ಮಾದರಿಯಲ್ಲಿ ಚಾಂಪಿಯನ್ಸ್‌ ಟ್ರೋಫಿ ನಡೆಸಲು ತೀರ್ಮಾನಿಸಲಾಯಿತು. ಭಾರತದ ಪಂದ್ಯಗಳನ್ನು ದುಬೈನಲ್ಲಿ ನಡೆಸಿ ಉಳಿದೆಲ್ಲಾ ತಂಡಗಳ ಪಂದ್ಯಗಳನ್ನು ಪಾಕಿಸ್ತಾನದಲ್ಲಿ ನಡೆಸಲು ನಿರ್ಧರಿಸಲಾಯಿತು.

    ಇಷ್ಟೆಲ್ಲಾ ಹೈಡ್ರಾಮಾಗಳ ಬಳಿಕ ಚಾಂಪಿಯನ್ಸ್‌ ಟ್ರೋಫಿಗೆ ಟೀಮ್‌ ಇಂಡಿಯಾ ಬಳಸುವ ಜೆರ್ಸಿಯಲ್ಲಿ ಟ್ರೋಫಿ ಆತಿಥ್ಯ ವಹಿಸುವ ಪಾಕಿಸ್ತಾನದ ಹೆಸರನ್ನು ಹಾಕಿಕೊಳ್ಳವುದಿಲ್ಲ ಎಂದೂ ಸಹ ವರದಿಯಾಗಿತ್ತು. ಆದರೆ ಇದೀಗ ಚಾಂಪಿಯನ್ಸ್‌ ಟ್ರೋಫಿಗೆ ಭಾರತ ತಂಡದ ಜೆರ್ಸಿ ಅನಾವರಣಗೊಂಡಿದ್ದು, ಜೆರ್ಸಿಯ ಬಲಭಾಗದಲ್ಲಿ ಚಾಂಪಿಯನ್ಸ್‌ ಟ್ರೋಫಿ ಲೋಗೊ ಕೆಳಗೆ ಪಾಕಿಸ್ತಾನದ ಹೆಸರನ್ನು ಮುದ್ರಿಸಲಾಗಿದೆ.

    ಸದ್ಯ ಈ ಫೊಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಚರ್ಚೆಗಳು ಏರ್ಪಟ್ಟಿವೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading