ನಾಗ್ಪುರ: ಇಲ್ಲಿನ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ರಣಜಿ ಟ್ರೋಫಿಯ ಎರಡನೇ ಸೆಮಿಫೈನಲ್ ಪಂದ್ಯ ಜರುಗುತ್ತಿದ್ದು, ಈ ಪಂದ್ಯದಲ್ಲಿ ಮುಂಬೈ ಹಾಗೂ ವಿದರ್ಭ ತಂಡಗಳು ಮುಖಾಮುಖಿಯಾಗಿವೆ.
ಈ ಪಂದ್ಯದಲ್ಲಿ ಮುಂಬೈ ಪರ ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ ಡಕ್ಔಟ್ ಆಗುವ ಮೂಲಕ ಮತ್ತೊಮ್ಮೆ ನಿರಾಸೆ ಮೂಡಿಸಿದ್ದಾರೆ.
ಅಲ್ಲದೇ ಸೂರ್ಯಕುಮಾರ್ ಯಾದವ್ ತಮ್ಮ ಕೊನೆಯ ಮೂರು ಕ್ರಿಕೆಟ್ ಪಂದ್ಯಗಳಲ್ಲಿ ಡಕ್ಔಟ್ ಆಗಿದ್ದು ಸದ್ಯ ಅತಿಕೆಟ್ಟ ಫಾರ್ಮ್ನಲ್ಲಿದ್ದಾರೆ.
ಇದೇ ವೇಳೆ ಸೂರ್ಯಕುಮಾರ್ ಯಾದವ್ ಆಡಿದ ಕೊನೆಯ 10 ಪಂದ್ಯಗಳ ರನ್ ವಿವರ ವೈರಲ್ ಆಗುತ್ತಿದ್ದು, ಒಂದು ಇನ್ನಿಂಗ್ಸ್ನಲ್ಲಿ 70 ರನ್ ಗಳಿಸಿದ್ದು ಬಿಟ್ಟರೆ ಇನ್ನುಳಿದ ಎಲ್ಲಾ ಇನ್ನಿಂಗ್ಸ್ನಲ್ಲಿಯೂ ಮಕಾಡೆ ಮಲಗಿದ್ದಾರೆ.
ಹೌದು, ಸೂರ್ಯಕುಮಾರ್ ಯಾದವ್ ತಮ್ಮ ಕೊನೆಯ 10 ಪಂದ್ಯಗಳಲ್ಲಿ 0(2), 70(86), 9(5), 2(3), 0(4), 14(7), 12(7), 0(3), 0(1) ಹಾಗೂ 0(5) ರನ್ ಗಳಿಸಿದ್ದಾರೆ. ಸದ್ಯ ಈ ಅಂಕಿಅಂಶ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಸೂರ್ಯಕುಮಾರ್ ಯಾದವ್ ಫಾರ್ಮ್ ಕುರಿತು ತಲೆಕೆಡಿಸಿಕೊಂಡಿದ್ದಾರೆ ಹಾಗೂ ಕಿಡಿಕಾರುತ್ತಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


