Thursday, September 3, 2026
spot_img
More
    spot_img
    HomeStateಯಡಿಯೂರಪ್ಪ ಕುಟುಂಬದ ವಿರುದ್ಧ ಯತ್ನಾಳ್‌ ಅಸಮಾಧಾನ; ಕೇಂದ್ರ ಸಮಿತಿಗೆ ಯತ್ನಾಳ್‌ ಬರೆದ ಉತ್ತರದಲ್ಲಿ ಏನಿದೆ?

    ಯಡಿಯೂರಪ್ಪ ಕುಟುಂಬದ ವಿರುದ್ಧ ಯತ್ನಾಳ್‌ ಅಸಮಾಧಾನ; ಕೇಂದ್ರ ಸಮಿತಿಗೆ ಯತ್ನಾಳ್‌ ಬರೆದ ಉತ್ತರದಲ್ಲಿ ಏನಿದೆ?

    ಬೆಂಗಳೂರು: ಪಕ್ಷದ ನಾಯಕತ್ವದ ವಿರುದ್ಧ ಹೇಳಿಕೆ ನೀಡಿದ ಸಂಬಂಧ ಕೇಂದ್ರ ಶಿಸ್ತು ಸಮಿತಿ ನೀಡಿದ್ದ ನೋಟಿಸ್‌ಗೆ ಬಿಜೆಪಿ ಶಾಸಕ ಬಸನಗೌಡ್‌ ಪಾಟೀಲ್‌ ಯತ್ನಾಳ್‌ ಉತ್ತರ ನೀಡಿದ್ದಾರೆ.

    Advertisement

    ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದ ಯತ್ನಾಳ್‌ ಅವರಿಗೆ ಸಮಿತಿ ಇದೇ 10ರಂದು ನೋಟಿಸ್‌ ನೀಡಿ 72 ಗಂಟೆಗಳಲ್ಲಿ ಉತ್ತರ ನೀಡುವಂತೆ ಸೂಚಿಸಿತ್ತು. ಇದಕ್ಕೆ 5 ಪುಟಗಳಷ್ಟು ವಿವರವಾದ ಉತ್ತರ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ನಾನು ಯಾವುದೇ ಬಣ ರಾಜಕಾರಣ ಮಾಡಿಲ್ಲ. ಪಕ್ಷದ ಚೌಕಟ್ಟಿನಲ್ಲೇ ವಕ್ಫ್‌ ಹೋರಾಟ ನಡೆಸಿದ್ದೇವೆ. ಪಕ್ಷಕ್ಕೆ ಧಕ್ಕೆಯಾಗುವಂತಹ ಕೆಲಸವನ್ನು ಮಾಡಿಲ್ಲ ಎಂದು ಉತ್ತರಿಸಿದ್ದಾರೆ.

    ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಪಕ್ಷದ ಹಿರಿಯರನ್ನು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತಿಲ್ಲ. ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುವುದಕ್ಕೆ ಹಲವಾರು ಅವಕಾಶಗಳು ದೊರಕಿದ್ದವು. ಆದರೆ, ರಾಜ್ಯಾಧ್ಯಕ್ಷರ ಅಸಮರ್ಥ ನಾಯಕತತ್ವದಿಂದ ಈ ಎಲ್ಲ ಹೋರಾಟಗಳಲ್ಲಿ ಪಕ್ಷ ವಿಫಲವಾಗಿದೆ ಎಂದು ದೂರಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ ಪಕ್ಷ ಬಲಪಡಿಸಲು ಈಗಲೇ ಅಧ್ಯಕ್ಷರನ್ನು ಬದಲಿಸಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಮುನ್ನಡೆಸುವವರಿಗೆ ಆ ಹೊಣೆಗಾರಿಕೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎಂದು ಮೂಲಗಳು ಹೇಳಿವೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading