ಬೆಂಗಳೂರು: ನಗರದ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಐಪಿಎಲ್‌ನ 34ನೇ ಪಂದ್ಯ ನಡೆಯುತ್ತಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ.
ಇನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತುಂತುರು ಮಳೆಯಾಗುತ್ತಿದ್ದು, ಟಾಸ್ ವಿಳಂಬವಾಗಿದೆ.
ಇನ್ನು ಎರಡೂ ತಂಡಗಳೂ ಸಹ ಈ ಬಾರಿಯ ಟೂರ್ನಿಯಲ್ಲಿ ಸರಿಸಮನಾದ ಯಶಸ್ಸನ್ನು ಸಾಧಿಸಿದ್ದು, ಇಂದಿನ ಪಂದ್ಯದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.
ಎರಡೂ ತಂಡಗಳೂ ಸಹ ಟೂರ್ನಿಯಲ್ಲಿ ಇಲ್ಲಿಯವರೆಗೆ 6 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳಲ್ಲಿ ಸೋಲುವುದರ ಮೂಲಕ ತಲಾ 8 ಅಂಕಗಳನ್ನು ಪಡೆದುಕೊಂಡಿವೆ. ಆದರೆ ಪಂಜಾಬ್ ಕಿಂಗ್ಸ್ ತಂಡಕ್ಕಿಂತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಧಿಕ ಅಂಕ ಹೊಂದಿರುವ ಕಾರಣ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ ಹಾಗೂ ಪಂಜಾಬ್ ನಾಲ್ಕನೇ ಸ್ಥಾನದಲ್ಲಿದೆ.
ಇನ್ನು ಇತ್ತಂಡಗಳ ನಡುವೆ ನಡೆಯಲಿರುವ ಈ ಪಂದ್ಯ ಈ ಬಾರಿಯ ಟೂರ್ನಿಯ 34ನೇ ಪಂದ್ಯವೂ ಹೌದು ಹಾಗೂ ಇತ್ತಂಡಗಳ ನಡುವೆ ಐಪಿಎಲ್‌ನಲ್ಲಿ ನಡೆಯಲಿರುವ 34ನೇ ಪಂದ್ಯ ಕೂಡ ಹೌದು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


