ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ( ಏಪ್ರಿಲ್ 18 ) ಐಪಿಎಲ್‌ನ 34ನೇ ಪಂದ್ಯ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಇನ್ನು ಎರಡೂ ತಂಡಗಳೂ ಸಹ ಈ ಬಾರಿಯ ಟೂರ್ನಿಯಲ್ಲಿ ಸರಿಸಮನಾದ ಯಶಸ್ಸನ್ನು ಸಾಧಿಸಿದ್ದು, ಇಂದಿನ ಪಂದ್ಯದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.
ಎರಡೂ ತಂಡಗಳೂ ಸಹ ಟೂರ್ನಿಯಲ್ಲಿ ಇಲ್ಲಿಯವರೆಗೆ 6 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳಲ್ಲಿ ಸೋಲುವುದರ ಮೂಲಕ ತಲಾ 8 ಅಂಕಗಳನ್ನು ಪಡೆದುಕೊಂಡಿವೆ. ಆದರೆ ಪಂಜಾಬ್ ಕಿಂಗ್ಸ್ ತಂಡಕ್ಕಿಂತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಧಿಕ ಅಂಕ ಹೊಂದಿರುವ ಕಾರಣ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ ಹಾಗೂ ಪಂಜಾಬ್ ನಾಲ್ಕನೇ ಸ್ಥಾನದಲ್ಲಿದೆ.
ಇನ್ನು ಇತ್ತಂಡಗಳ ನಡುವೆ ನಡೆಯಲಿರುವ ಈ ಪಂದ್ಯ ಈ ಬಾರಿಯ ಟೂರ್ನಿಯ 34ನೇ ಪಂದ್ಯವೂ ಹೌದು ಹಾಗೂ ಇತ್ತಂಡಗಳ ನಡುವೆ ಐಪಿಎಲ್‌ನಲ್ಲಿ ನಡೆಯಲಿರುವ 34ನೇ ಪಂದ್ಯ ಕೂಡ ಹೌದು.
ಎರಡೂ ತಂಡಗಳು ಐಪಿಎಲ್ ಇತಿಹಾಸದಲ್ಲಿ ಒಟ್ಟು 33 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಪಂಜಾಬ್ ಕಿಂಗ್ಸ್ 17 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು 16 ಪಂದ್ಯಗಳಲ್ಲಿ ಗೆದ್ದಿದೆ. ಇನ್ನು ಕಳೆದ ವರ್ಷ ನಡೆದಿದ್ದ ಎರಡೂ ಪಂದ್ಯಗಳನ್ನೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆದ್ದಿತ್ತು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


