ಬೆಂಗಳೂರು: ಹಣ ಪಡೆದು ವಂಚಿಸಿದ್ದಲ್ಲದೇ ನನ್ನ ಮೇಲೆ ಹಲ್ಲೆನಡೆಸಿ ಕಿರುಕುಳ ನೀಡಿರುವರ ಬಗ್ಗೆ ಫೇಸ್‍ಬುಕ್‍ನಲ್ಲಿ ವಿಡಿಯೋ ಪೋಸ್ಟ್ ಮಾಡಿ ಬಿಜೆಪಿ ಕಾರ್ಯಕರ್ತರೊಬ್ಬರು ಇಲ್ಲಿನ ಖಾಸಗಿ ಶಾಲೆ ಬಳಿಯ ಮರಕ್ಕೆ ನೇಣು ಹಾಕಿಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಅನೇಕಲ್ ನಲ್ಲಿ ನಡೆದಿದೆ.
ಪ್ರವೀಣ್ ಗೌಡ ಬೇಲೂರು (35) ಆತಹತ್ಯೆಗೆ ಶರಣಾದ ಯುವಕ. ಆತಹತ್ಯೆಗೂ ಮುನ್ನ ನನ್ನ ಸಾವಿಗೆ ಸಮಂದರ್ ಕಿರಣ್, ಗೋಕುಲ್ ಫ್ಯಾಷನ್ ಹರೀಶ್, ಭಾಸ್ಕರ್ ನಾರಾಯಣಪ್ಪ, ದೊಡ್ಡಹಾಗಡೆ ಮಧುಗೌಡ ಜೊತೆಗೆ ಸರವಣ ಇವರೆಲ್ಲಾ ಕಾರಣಕರ್ತರು ಎಂದು ವೀಡಿಯೋದಲ್ಲಿ ಉಲ್ಲೇಖಿಸಿದ್ದಾರೆ.
ಫೇಸ್‍ಬುಕ್‍ನಲ್ಲಿ ತಮಗಾದ ಅನ್ಯಾಯದ ಬಗ್ಗೆ ಹೇಳಿಕೊಂಡಿದ್ದು, ಕಳೆದ ಎರಡು ತಿಂಗಳಿನಿಂದ ಮಾನಸಿಕವಾಗಿ ನೊಂದಿದ್ದೇನೆ. ಯಾರನ್ನೂ ಬಿಟ್ಟರೂ ಕಿರಣ್ ಗೌಡನನ್ನು ದಯವಿಟ್ಟು ಬಿಡಬೇಡಿ ಎಂದು ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕಿರಣ್ ತುಂಬಾ ಹೆಣ್ಣುಮಕ್ಕಳಿಗೆ ಫೋನ್ ಮಾಡಿ ಟಾರ್ಚರ್ ಕೊಡುತ್ತಾನೆ. ಇವನು ಮಾಡಿರುವ ಅನಾಚಾರ ನನ್ನ ಮೇಲೆ ಬಂದಿದೆ. ನಾನು ನೀಡಿದ್ದ ಹಣ ಕೊಡುವುದಾಗಿ ಹೇಳಿ ಮಾತುಕತೆಗೆ ಕರೆಸಿಕೊಂಡು ಮನಬಂದಂತೆ ಹಲ್ಲೆ ನಡೆಸಿರುವ ಬಗ್ಗೆಯೂ ವಿಡಿಯೋದಲ್ಲಿ ಆರೋಪಿಸಿದ್ದಾರೆ.
Disclaimer: ಯಾವುದೇ ಸಮಸ್ಯೆಗೂ ಸಾವೊಂದೇ ಪರಿಹಾರವಲ್ಲ. ಆತ್ಮಹತ್ಯೆಯ ಯೋಚನೆ ಬಂದರೆ ನಿಮ್ಮ ನೆಚ್ಚಿನ ವ್ಯಕ್ತಿ ಜೊತೆ ಮಾತನಾಡಿ ಪರಿಹಾರ ಕಂಡುಕೊಳ್ಳಿ. ಇಲ್ಲವೇ ಈ ಸಹಾಯವಾಣಿಗೆ ಕರೆಮಾಡಿ: 9152987821
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


