ನಿನ್ನೆ ( ಏಪ್ರಿಲ್ 17 ) ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಹಿಂದುಳಿದ ವರ್ಗಗಗಳ ಆಯೋಗ ಸಿದ್ಧಪಡಿಸಿರುವ ಕರ್ನಾಟಕ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ವರದಿಯ ಕುರಿತಾಗಿ ವಿಶೇಷ ಸಚಿವ ಸಂಪುಟ ಸಭೆಯನ್ನು ಕರೆದಿದ್ದರು.
ಸುಮಾರು ಎರಡೂವರೆ ಗಂಟೆಗಳ ಕಾಲ ನಡೆದ ಈ ಸಭೆಯಲ್ಲಿ ವರದಿಯನ್ನು ಮೊದಲೇ ಅಧ್ಯಯನ ಮಾಡಿಕೊಂಡು ಬಂದಿದ್ದ ಸಚಿವರು ತಮ್ಮ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.
ಈ ವೇಳೆ ಲಿಂಗಾಯತ ಸಮುದಾಯದ ಎಸ್‌ಎಸ್ ಮಲ್ಲಿಕಾರ್ಜುನ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜಾತಿಗಣತಿ ವರದಿಯೇ ಸರಿಯಿಲ್ಲ ಅದನ್ನು ತಿರಸ್ಕರಿಸಬೇಕು ಎಂದು ಅವರು ವರದಿಯ ವಿರುದ್ಧ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸಮುದಾಯ ಹಾಗೂ ಉಪ ಪಂಗಡಗಳನ್ನು ವಿಭಜಿಸಲಾಗಿದೆ ಎಂದು ಆರೋಪಿಸಿದ ಅವರು ತಮ್ಮ ಅಸಾಮಾಧಾನವನ್ನು ವ್ಯಕ್ತಪಡಿಸಿದರು ಹಾಗೂ ಇದಕ್ಕೆ ಈಶ್ವರ್ ಖಂಡ್ರೆ ಸಹ ಬೆಂಬಲ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


