Friday, August 7, 2026
spot_img
More
    spot_img
    HomeTop Storyಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ಮಹಿಳೆ ಭೀಕರ ಸಾವು; ಹಿಟ್ ಅಂಡ್...

    ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ಮಹಿಳೆ ಭೀಕರ ಸಾವು; ಹಿಟ್ ಅಂಡ್ ರನ್!

    ಮಂಡ್ಯ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ದಾರುಣವಾಗಿ ಸಾವನ್ನಪ್ಪಿದ ಘಟನೆ ತಾಲೂಕಿನ ಹನಕೆರೆ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಘಟನೆ ಹಿನ್ನೆಲೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದರು.

    Advertisement

    ಬಿ.ಗೌಡಗೆರೆ ಗ್ರಾಮದ ಜಿ.ಕೆ.ಕೆಂಪೇಗೌಡ ಎಂಬವರ ಪತ್ನಿ ಯಶೋದಮ್ಮ (55) ಮೃತ ಮಹಿಳೆ ಹೆದ್ದಾರಿ ದಾಟುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಮಹಿಳೆಯರ ದೇಹ ಸಂಪೂರ್ಣ ಇದ್ರಗೊಂಡಿದೆ. ಘಟನೆಗೆ ಕಾರಣವಾದ ವಾಹನವನ್ನು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದಾನೆ.

    ಇದು ಸುತ್ತಮುತ್ತಲ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆ ಹಿನ್ನಲೆಯಲ್ಲಿ ಸ್ಥಳೀಯರು ಹೆದ್ದಾರಿಯ ಎರಡೂ ಮಾರ್ಗಗಳಲ್ಲಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದರು. ಅಗತ್ಯ ಸ್ಥಳದಲ್ಲಿ ಅಂಡರ್‌ಪಾಸ್ ನಿರ್ಮಿಸಿಲ್ಲ. ಇದರಿಂದ ಸ್ಥಳೀಯರು ಹೆದ್ದಾರಿ ದಾಟಲು ತೊಂದರೆಯಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದಿಂದ ಇಂತಹ ಘಟನೆಗಳು ಸಂಭವಿಸುತ್ತಿವೆ ಎಂದು ಕಿಡಿಕಾರಿದರು.

    ಅಧಿಕಾರಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ತಮ್ಮ ಸಿಟ್ಟು ಹೊರಹಾಕಿದರು. ಸ್ಥಳಕ್ಕೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಮಿಸಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದರು. ಡಿಸಿ, ಎಸ್ಪಿ ಆಗಮಿಸಿದ ಹೊರತು ಶವವನ್ನು ತೆಗೆಯಲು ಬಿಡದೆ ಕಿಡಿಕಾರಿದರು. ಇದರಿಂದ ಹೆದ್ದಾರಿಯಲ್ಲಿ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು.

    ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಸ್ಥಳಕ್ಕೆ ತೆರಳಿ ಪ್ರತಿಭಟನಾಕಾರರೊಂದಿಗೆ ಸಮಾಲೋಚನೆ ನಡೆಸಿ ಮನವೊಲಿಸಿದರು. ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading