Tuesday, November 3, 2026
spot_img
More
    spot_img
    HomeLatest newsಯುಪಿಐ ಬದಲು ಹಣ ಪಡೆದರೂ ತಪ್ಪಲ್ಲ ಜಿಎಸ್‌ಟಿ ತೆರಿಗೆ!

    ಯುಪಿಐ ಬದಲು ಹಣ ಪಡೆದರೂ ತಪ್ಪಲ್ಲ ಜಿಎಸ್‌ಟಿ ತೆರಿಗೆ!

    ಬೆಂಗಳೂರು: ನಗದು, ಯುಪಿಐ, ಪಿಒಎಸ್ ಮಷಿನ್, ಬ್ಯಾಂಕ್ ಖಾತೆ ಇತರ ಯಾವುದೇ ವಿಧಾನಗಳಿಂದ ಆರ್ಥಿಕ ವರ್ಷದಲ್ಲಿ 40 ಲಕ್ಷ ರೂ. ಮೀರಿದರೆ ಅಥವಾ ಸೇವೆಗಳ ಪೂರೈಕೆದಾರರ ಸಮಗ್ರ ವಹಿವಾಟು 20 ಲಕ್ಷ ರೂ. ಮೀರಿದರೆ, ಅಂತಹ ವರ್ತಕರು ಜಿಎಸ್‌ಟಿ ನೋಂದಣಿ ಪಡೆಯುವುದು ಕಡ್ಡಾಯವಾಗಿದೆ.

    ಯುಪಿಐ ಮೂಲಕ ಹಣ ಪಡೆಯುವದನ್ನು ನಿಲ್ಲಿಸಿ, ನಗದು ರೂಪದಲ್ಲಿ ಹಣ ಸ್ವೀಕರಿಸಿದರೂ ಜಿಎಸ್‌ಟಿ ತೆರಿಗೆ ಅನ್ವಯವಾಗುತ್ತದೆ ಎಂದು ವಾಣಿಜ್ಯ ತೆರಿಗೆ ಹೆಚ್ಚುವರಿ ಆಯುಕ್ತರು ತಿಳಿಸಿದ್ದಾರೆ. ಇಲಾಖೆ ನೋಟಿಸ್‌ ನೀಡಿದ ಬೆನ್ನಲ್ಲೇ ಕೆಲವು ವರ್ತಕರು, ಯುಪಿಐ ಮೂಲಕ ಹಣಪಡೆಯುವುದನ್ನು ನಿಲ್ಲಿಸಿ, ಗ್ರಾಹಕರಿಂದ ನಗದು ರೂಪದಲ್ಲಿ ಹಣ ಸ್ವೀಕರಿಸುತ್ತಿರುವುದು ಇಲಾಖೆ ಗಮನಕ್ಕೆ ಬಂದಿದೆ. ವರ್ತಕರು ತಮ್ಮ ವಹಿವಾಟಿನ ಪ್ರತಿಫಲವನ್ನು ಯಾವುದೇ ರೂಪದಲ್ಲಿ ಪಡೆದಿದ್ದರೂ ಜಿಎಸ್‌ಟಿ ಅನ್ವಯವಾಗುತ್ತದೆ. ವರ್ತಕರಿಂದ ಜಿಎಸ್‌ಟಿ ಕಾಯ್ದೆಯಡಿ ಅನ್ವಯಿಸುವ ತೆರಿಗೆ ಸಂಗ್ರಹಿಸಲು ಇಲಾಖೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ. ಈಗಾಗಲೇ ಶೇ.90 ವರ್ತಕರು ರಾಜಿ ತೆರಿಗೆ ಪದ್ಧತಿಯಡಿ ತೆರಿಗೆ ಪಾವತಿಸುತ್ತಿರುವುದರಿಂದ ಉಳಿಕೆ ಶೇ.10 ವರ್ತಕರು ತೆರಿಗೆ ಪಾವತಿಸದಿರುವುದು ತರವಲ್ಲ. ಜಿಎಸ್‌ಟಿ ಕಾಯ್ದೆಯು ಇಂತಹ ತಾರತಮ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದಿದ್ದಾರೆ.

    ಎಕ್ಕ ಮೊದಲ ದಿನದ ಬಾಕ್ಸ್‌ಆಫೀಸ್‌ ಗಳಿಕೆ ಹೇಗಿದೆ? ನಿರ್ಮಾಪಕರ ಮೊದಲ ಪ್ರತಿಕ್ರಿಯೆ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗೆ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search