Monday, November 2, 2026
spot_img
More
    spot_img
    HomeSportsCricketವರ್ಲ್ಡ್‌ ಚಾಂಪಿಯನ್‌ಶಿಪ್‌ ಆಫ್‌ ಲೆಜೆಂಡ್ಸ್‌ ಶುರು: ಯುವಿ ಟೀಮ್‌ ಇಂಡಿಯಾ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

    ವರ್ಲ್ಡ್‌ ಚಾಂಪಿಯನ್‌ಶಿಪ್‌ ಆಫ್‌ ಲೆಜೆಂಡ್ಸ್‌ ಶುರು: ಯುವಿ ಟೀಮ್‌ ಇಂಡಿಯಾ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

    ಲಂಡನ್: ಕಳೆದ 2-3 ದಶಕಗಳಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಿಂಚಿದ್ದ ಸ್ಟಾರ್ ಕ್ರಿಕೆಟಿಗರು ನಿವೃತ್ತಿಯಾದ ಬಳಿಕ ಅವರ ಆಟವನ್ನು ಮಿಸ್ ಮಾಡಿಕೊಳ್ಳುತ್ತಿದ್ದವರಿಗೆ ಸಿಹಿ ಸುದ್ದಿ ಇಲ್ಲಿದೆ. ಇಂದು ( ಜುಲೈ 18 ) ಬರ್ಮಿಂಗ್‌ಹ್ಯಾಮ್‌ನ ಎಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಪಾಕಿಸ್ತಾನ ಚಾಂಪಿಯನ್‌ ಹಾಗೂ ಇಂಗ್ಲೆಂಡ್‌ ಚಾಂಪಿಯನ್‌ ತಂಡಗಳ ನಡುವೆ ನಡೆಯಲಿರುವ ಉದ್ಘಾಟನಾ ಪಂದ್ಯದ ಮೂಲಕ ಟೂರ್ನಿ ಆರಂಭಗೊಳ್ಳಲಿದೆ.

    ಈ ಮಾಜಿ ಕ್ರಿಕೆಟಿಗರು ಇದೀಗ ಎರಡನೇ ಆವೃತ್ತಿಯ ಲೆಜೆಂಡ್ಸ್ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಮರಳಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಭಾರತ, ಪಾಕಿಸ್ತಾನ, ಇಂಗ್ಲೆಂಡ್, ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್, ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗರು ಶುಕ್ರವಾರದಿಂದ ಮತ್ತೆ ಹಳೆಯ ಉತ್ಸಾಹದೊಂದಿಗೆ ಸೆಣಸಲಿದ್ದಾರೆ.

    ಆತಿಥೇಯ ಇಂಗ್ಲೆಂಡ್ ಮತ್ತು ಪಾಕಿಸ್ತಾನ ತಂಡಗಳ ಮುಖಾಮುಖಿಯೊಂದಿಗೆ ಟೂರ್ನಿಗೆ ಚಾಲನೆ ಸಿಗಲಿದೆ. ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಹೈವೋಲ್ವೇಜ್ ಪಂದ್ಯ ಭಾನುವಾರ ನಡೆಯಲಿದೆ. ಈ ಪಂದ್ಯದೊಂದಿಗೆ ಹಾಲಿ ಚಾಂಪಿಯನ್ ಭಾರತ ತಂಡ ಟೂರ್ನಿಯಲ್ಲಿ ಅಭಿಯಾನ ಆರಂಭಿಸಲಿದೆ. ಇಂಗ್ಲೆಂಡ್‌ನ 4 ತಾಣಗಳಾದ ಎಜ್‌ಬಾಸ್ಟನ್, ನಾರ್ಥಂಪ್ಟನ್, ಲೀಸೆಸ್ಟರ್ ಮತ್ತು ಲೀಡ್ಸ್‌ನಲ್ಲಿ ಪಂದ್ಯಗಳು ನಡೆಯಲಿವೆ.

    ರೌಂಡ್ ರಾಬಿನ್ ಲೀಗ್ ಬಳಿಕ ಅಗ್ರ 4 ತಂಡಗಳು ಸೆಮಿಫೈನಲ್‌ಗೇರಲಿವೆ. ಎಲ್ಲ 3 ನಾಕೌಟ್ ಪಂದ್ಯಗಳು ಬರ್ಮಿಂಗ್‌ಹ್ಯಾಂನ ಎಜ್‌ಬಾಸ್ಟನ್ ಮೈದಾನದಲ್ಲೇ ನಡೆಯಲಿವೆ. ಎರಡೂ ಸೆಮಿಫೈನಲ್ ಪಂದ್ಯಗಳು ಜುಲೈ 31ರಂದು ನಡೆಯಲಿವೆ. ಫೈನಲ್ ಪಂದ್ಯ ಆಗಸ್ಟ್ 2ರಂದು ನಡೆಯಲಿದೆ.

    ಭಾರತ ತಂಡದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.
    ಭಾರತ vs ಪಾಕಿಸ್ತಾನ – ಜುಲೈ 20
    ಭಾರತ vs ದಕ್ಷಿಣ ಆಫ್ರಿಕಾ – ಜುಲೈ 22
    ಭಾರತ vs ಆಸ್ಟ್ರೇಲಿಯಾ – ಜುಲೈ 26
    ಭಾರತ vs ಇಂಗ್ಲೆಂಡ್‌ – ಜುಲೈ 27
    ಭಾರತ vs ವೆಸ್ಟ್‌ ಇಂಡೀಸ್‌ – ಜುಲೈ 29

    ಎಕ್ಕ ಮೊದಲ ದಿನದ ಬಾಕ್ಸ್‌ಆಫೀಸ್‌ ಗಳಿಕೆ ಹೇಗಿದೆ? ನಿರ್ಮಾಪಕರ ಮೊದಲ ಪ್ರತಿಕ್ರಿಯೆ

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search