ಬೆಂಗಳೂರು: ಬಿಜೆಪಿಗರು ರ್ಯಾಲಿ ಮಾಡುತ್ತಿರುವುದು ಧರ್ಮಸ್ಥಳದ ಪರವಾಗಿಯೇ ಹೊರತು ನ್ಯಾಯದ ಪರ ಅಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಧರ್ಮಸ್ಥಳದ ಮೇಲೆ ಬಂದಿರುವ ಆರೋಪಿಗಳಿಗೆ ಮುಕ್ತಿ ಸಿಗಲಿ, ಅದು ಅತ್ಯನಾ ಅಥವಾ ಸುಳ್ಳಾ ಅನ್ನೋದು ಜನಕ್ಕೆ ಗೊತ್ತಾಗಲಿ ಎಂದು ಎಸ್‌ಐಟಿ ರಚನೆ ಮಾಡಿದ್ದೇವೆ. ಅದರಲ್ಲಿ ಈಗ ಏನು ಸಿಕ್ಕಿಲ್ಲ ಎಂದು ಗೊತ್ತಾದ ಮೇಲೆ ಬಿಜೆಪಿಗರು ಧರ್ಮಸ್ಥಳದ ಪರವಾಗಿ ರ್ಯಾಲಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇಷ್ಟು ದಿನ ರ್ಯಾಲಿ ಯಾಕೆ ಮಾಡಲಿಲ್ಲ? ಎಸ್‌ಐಟಿ ರಚನೆ ಆದಾಗ ಯಾಕೆ ಅವರು ಮಾತಾಡಲಿಲ್ಲ. ಈಗ ರಾಜಕೀಯ ಮಾಡೋಕೆ ಬಂದಿದ್ದಾರೆ. ಇದು ಧರ್ಮಸ್ಥಳ ಪರ ರ್ಯಾಲಿ ಅನ್ನೋದಕ್ಕಿಂತ ಬಿಜೆಪಿಯ ರಾಜಕೀಯ ರ್ಯಾಲಿ ಎನ್ನಬಹುದು ಎಂದು ಟೀಕೆ ಮಾಡಿದ್ದಾರೆ.
ಇನ್ನು ಕಳೆದ ಮೂರು ದಿನಗಳ ಹಿಂದೆಯಷ್ಟೇ ಡಿಕೆಶಿ ಮಾತನಾಡುವಾಗ ಇದೊಂದು ಖಾಲಿ ಡಬ್ಬ ಏನೂ ಇಲ್ಲ. ಅಲ್ಲಿ ಕೇವಲ ಸದ್ದು ಜಾಸ್ತಿ ಆಗುತ್ತಿದೆ. ಈ ಪ್ರಕರಣಗಳ್ಲಲಿ ಬಹಳ ಷಡ್ಯಂತ್ರ ನಡೆದಿದೆ. ಯಾರದ್ದು ಷಡ್ಯಂತ್ರ ಎಂದು ಈಗ ನಾನು ಹೇಳಲ್ಲ. ಬಹಲ ಪ್ಲ್ಯಾನ್ ಮಾಡಿ ಅವರ ಮೇಲೆ ಕಪ್ಪು ಚುಕೆ ತರಲು ನೋಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು.
ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್ ಡಿ ಎ ಅಭ್ಯರ್ಥಿ ಹೆಸರು ಘೋಷಣೆ !
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


