Wednesday, September 2, 2026
spot_img
More
    spot_img
    HomeLatest newsಧರ್ಮಸ್ಥಳದ ಕುರಿತ ಅಪಪ್ರಚಾರ ತಡೆಯಲು ರಾಜ್ಯ ಸರ್ಕಾರಕ್ಕೆ ಇಷ್ಟ ಇಲ್ವಾ?; ವಿಜಯೇಂದ್ರ ಕಿಡಿ

    ಧರ್ಮಸ್ಥಳದ ಕುರಿತ ಅಪಪ್ರಚಾರ ತಡೆಯಲು ರಾಜ್ಯ ಸರ್ಕಾರಕ್ಕೆ ಇಷ್ಟ ಇಲ್ವಾ?; ವಿಜಯೇಂದ್ರ ಕಿಡಿ

    ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಈ ಹಿಂದೆ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಅನಾಮಿಕ ವ್ಯಕ್ತಿಯೊಬ್ಬ ಅದೇ ಗ್ರಾಮದಲ್ಲಿ ಸರಣಿ ಕೊಲೆ, ಅತ್ಯಾಚಾರ ಕೊಲೆಗಳು ನಡೆದಿವೆ ಎಂದು ಆರೋಪಿಸಿ ದೂರು ನೀಡಿ ಆ ಹೆಣಗಳನ್ನು ತಾನೇ ಹೂತಿದ್ದು, ಆ ಜಾಗಗಳನ್ನು ತೋರಿಸಲಿದ್ದೇನೆ ಎಂದು ಉಲ್ಲೇಖಸಿದ್ದ.

    Advertisement

    ಈ ದೂರಿನ ಆಧಾರದ ಮೇಲೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಿದ್ದು, ಈ ತನಿಖೆ 20 ದಿನಗಳನ್ನು ಪೂರೈಸಿದ್ದು, ಸದ್ಯ ಬಿಜೆಪಿಯಿಂದ ತನಿಖೆ ಕುರಿತಂತೆ ಪ್ರಶ್ನೆಗಳು ಎದ್ದಿವೆ. ತನಿಖೆ ಎಲ್ಲಿಯವರೆಗೆ ಬಂದಿದೆ ಎಂದು ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಸುನಿಲ್‌ ಕುಮಾರ್‌ ಪ್ರಶ್ನಿಸಿದ್ದರು ಹಾಗೂ ತನಿಖೆ ನೆಪದಲ್ಲಿ ಧರ್ಮಸ್ಥಳದ ಕುರಿತು ಆಗುತ್ತಿರುವ ಅಪಪ್ರಚಾರದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

    ಅದೇ ರೀತಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸಹ ಧರ್ಮಸ್ಥಳ ಚಲೋ ಮಾಡಿ ಧಾರ್ಮಿಕ ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆಯುತ್ತಿರುವುದ್ನು ತಪ್ಪಿಸಬೇಕು ಎಂದು ಹೇಳಿದ್ದರು. ಇಂದು ( ಆಗಸ್ಟ್‌ 18 ) ಈ ಕುರಿತು ಮತ್ತೊಮ್ಮೆ ಮಾತನಾಡಿರುವ ಅವರು ಎಷ್ಟೇ ಆಗ್ರಹಿಸಿದರೂ ಸರ್ಕಾರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ತಡೆಗಟ್ಟುವ ಕೆಲಸ ಮಾಡುತ್ತಿಲ್ಲ, ಇಚ್ಛೆಯಿಂದಲೇ ಮಾಡುತ್ತಿಲ್ಲವೋ ಎಂದಿದ್ದಾರೆ.

    ಅಲ್ಲದೇ ಧರ್ಮಸ್ಥಳ ಪ್ರಕರಣದ ಎಸ್‌ಐಟಿ ತನಿಖೆಯ ಮಧ್ಯಂತರ ವರದಿಯನ್ನು ನೀಡಬೇಕು ಎಂದು ಕೇಳಿದ್ದೇವೆ. ಗೃಹ ಸಚಿವ ಪರಮೇಶ್ವರ್‌ ಅವರು ಇಂದಿನ ಸದನದಲ್ಲಿ ಅದನ್ನು ನೀಡುತ್ತಾರೆ ಹಾಗೂ ಧರ್ಮಸ್ಥಳದ ಕುರಿತು ಎದ್ದಿರುವ ಗೊಂದಲಗಳಿಗೆ ತೆರೆ ಎಳೆಯಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

    ಧರ್ಮಸ್ಥಳ ಅಂದರೆ ಗುದ್ದಲಿ ಸಮೇತ ಹೋಗುತ್ತೀರಿ, ಮಸೀದಿಗೆ ಹೋಗ್ತೀರಾ? ಸರ್ಕಾರದ ವಿರುದ್ಧ ಅಶೋಕ್‌ ಕಿಡಿ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading