ಗಣೇಶ ಹಬ್ಬದಂದು ಗಣೇಶಮೂರ್ತಿ ಖರೀದಿಸುವವರು ತಪ್ಪದೇ ಈ ಸುದ್ದಿ ಓದಿ
ರಾಜ್ಯದಲ್ಲಿ ಪಿಓಪಿ ಮತ್ತು ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳ ತಯಾರಿಕೆ ಹಾಗೂ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಪರಿಸರಕ್ಕೆ ಮಾರಕವಾದ ಪಿಒಪಿ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಮತ್ತು ವಿಸರ್ಜನೆ ನಿಷೇಧಿಸಿ 2023ರ ಸೆಪ್ಟೆಂಬರ್ 15ರಂದು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಇತ್ತೀಚೆಗೆ ರಾಜ್ಯ ಹೈಕೋರ್ಟ್ ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ನಿರ್ದೇಶನ ನೀಡಿದೆ.
ರಾಜ್ಯಾಧ್ಯಂತ ಪಿಒಪಿ ಗಣೇಶ ಮೂರ್ತಿ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಕೇವಲ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ತಯಾರಿಸಿ, ಬಳಕೆ ಮಾಡಲು ಅವಕಾಶ ನೀಡಲಾಗಿದೆ. ಒಂದು ವೇಳೆ ನಿಯಮ ಮೀರಿ ಪಿಒಪಿ ಗಣೇಶ ಮೂರ್ತಿ ತಯಾರಿಕೆ, ಮಾರಾಟ ಮಾಡಿದ್ರೇ 10,000 ದಂಡ ಹಾಗೂ ಜೈಲು ಶಿಕ್ಷೆ ಕಾಯಂ ಎಂಬುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ.
ಪಿಒಪಿ ಗಣೇಶ ಮೂರ್ತಿ ತಯಾರಿಕೆ, ಮಾರಾಟ ಮಾಡುವುದು ಜಲಮಾಲಿನ್ಯ(ತಡೆ ಮತ್ತು ನಿಯಂತ್ರಣ)ಕಾಯ್ದೆ 1974ರ ಕಲಂ33(ಎ) ರನ್ವಯ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಓಪಿ) ಮತ್ತು ಬಣ್ಣಲೇಪಿತ ವಿಗ್ರಹಗಳನ್ನು ತಯಾರಿಕೆ ಹಾಗೂ ಬಳಕೆ ಮಾಡುವುದು ಕಾನೂನು ಬಾಹೀರವಾಗಿದೆ. ಕಾಯ್ದೆಯನ್ನು ಉಲ್ಲಂಘಿಸಿದಲ್ಲಿ ಜಲಮಾಲಿನ್ಯ(ತಡೆ ಮತ್ತು ನಿಯಂತ್ರಣ)ಕಾಯ್ದೆ 1974ರ ಕಲಂ45(ಎ)ರನ್ವಯ ರೂ.10,000/-ಗಳ ವರೆಗೆ ದಂಡ ವಿಧಿಸಬಹುದಾಗಿದ್ದು ಮತ್ತು ಜೈಲುವಾಸ ಸಹ ವಿಧಿಸಬಹುದಾಗಿದೆ ಎಂಬುದಾಗಿ ಎಚ್ಚರಿಕೆ ನೀಡಿದೆ.
ಸಂಘ ಸಂಸ್ಥೆಗಳು ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆ ಮಾಡಲು ನಗರ ಸಭೆ, ಪೊಲೀಸ್, ಅಗ್ನಿ ಶಾಮಕ ಸೇರಿದಂತೆ ಸಕ್ಷಮ ಪ್ರಾಧಿಕಾರಗಳಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


