ಜಗದೀಪ್ ಧನ್ಕರ್ ರಾಜೀನಾಮೆಯಿಂದ ತೆರವಾಗಿರುವ ಉಪ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ಸಮೀಪಿಸುತ್ತಿದೆ. ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ. ಈ ಹುದ್ದೆಗೆ ಎನ್ ಡಿ ಎ ಅಭ್ಯರ್ಥಿಯಾಗಿ ರಾಧಾಕೃಷ್ಣನ್ ಹೆಸರನ್ನು ಘೋಷಣೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಪ್ರಮುಖ ಸಭೆಯ ನಂತರ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರನ್ನು ಎನ್ಡಿಎಯ ಉಪಾಧ್ಯಕ್ಷ ಅಭ್ಯರ್ಥಿ ಎಂದು ಘೋಷಿಸಿದರು.
ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಅವರು “ಉಪರಾಷ್ಟ್ರಪತಿ ಹುದ್ದೆಗೆ ಎನ್ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ನಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಬೀದಿಗಳಿಂದ ಸಂಸತ್ತಿನವರೆಗೆ ನಾವು ಎನ್ಡಿಎ ಜೊತೆ ನಿಲ್ಲುತ್ತೇವೆ” ಎಂದು ಪೋಸ್ಟ್ ಮಾಡಿದ್ದಾರೆ.
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಗಮನಸೆಳೆದಿದ್ದ ಸಿಪಿ ರಾಧಾಕೃಷ್ಣನ್ ಬಳಿಕ ಕೊಯಂಬತ್ತೂರಿನಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ರಾಜಕೀಯ ಜೀವನದ ನಿಸ್ವಾರ್ಥ ಸೇವೆ ಸಲ್ಲಿಸಿದ ಸಿಪಿ ರಾಧಕೃಷ್ಣನ್ ಅವರನ್ನು ಬಿಜೆಪಿ ರಾಜ್ಯಾಪಾಲರಾಗಿ ನೇಮಕ ಮಾಡಿತ್ತು. ಪುದುಚೇರಿ, ಜಾರ್ಖಂಡ್ ಹಾಗೂ ಸದ್ಯ ಮಹಾರಾಷ್ಟ್ರ ಗವರ್ನರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ತಮಿಳುನಾಡು ಮೂಲದ ರಾಧಾಕೃಷ್ಣನ್ ಅಭ್ಯರ್ಥಿ ಘೋಷಣೆ ಹಿಂದೆ ತಮಿಳುನಾಡು ಚುನಾವಣೆ ರಣತಂತ್ರವೂ ಅಡಗಿದೆ ಅನ್ನೋ ಮಾತುಗಳು ಕೇಳಿ ಬರುತ್ತಿದೆ. ಸಿಪಿ ರಾಧಾೃಷ್ಣನ್ ತಮ್ಮ 16ನೇ ವಯಸ್ಸಿನಿಂದ ಆರ್ಎಸ್ಎಸ್ ಸ್ವಯಂ ಸೇವಕರಾಗಿದ್ದಾರೆ. ಇದೀಗ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.
,ದರ್ಶನ್ ಆಪ್ತ ಧನ್ವೀರ್ ಗೌಡಗೆ ಪೊಲೀಸ್ ವಾರ್ನಿಂಗ್
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


