Monday, August 31, 2026
spot_img
More
    spot_img
    HomeLatest newsಕರ್ನಾಟಕದ 5 ಜಿಲ್ಲೆಗಳಿಗೆ ರೆಡ್ ಅಲರ್ಟ್: ಆಗಸ್ಟ್ 24ರವರೆಗೆ ಧಾರಾಕಾರ ಮಳೆ ಎಚ್ಚರಿಕೆ

    ಕರ್ನಾಟಕದ 5 ಜಿಲ್ಲೆಗಳಿಗೆ ರೆಡ್ ಅಲರ್ಟ್: ಆಗಸ್ಟ್ 24ರವರೆಗೆ ಧಾರಾಕಾರ ಮಳೆ ಎಚ್ಚರಿಕೆ

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತ ರೂಪಗೊಂಡಿದ್ದು, ಇದರ ಪರಿಣಾಮವಾಗಿ ಕರ್ನಾಟಕದಲ್ಲಿ ಮಳೆ ತೀವ್ರಗೊಂಡಿದೆ. ಇಂದು ಐದು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

    Advertisement

    ಇದೇ ವೇಳೆ, ಮೈಸೂರು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಯಾದಗಿರಿ, ಬೀದರ್ ಮತ್ತು ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಹಾಗೆಯೇ ಬೆಳಗಾವಿ, ಹಾವೇರಿ, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಂಗಳೂರಿನ ಜೊತೆಗೆ ರಾಮನಗರ, ವಿಜಯನಗರ, ತುಮಕೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ.

    ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ಗಾಳಿಯ ವೇಗ ಗಂಟೆಗೆ 40–50 ಕಿ.ಮೀ ಇರಬಹುದು. ಗರಿಷ್ಠ ತಾಪಮಾನ 25°C ಮತ್ತು ಕನಿಷ್ಠ ತಾಪಮಾನ 20°C ಇರಲಿದೆ.

    ಆಗಸ್ಟ್ 17ರಿಂದ 20ರವರೆಗೆ ಕರ್ನಾಟಕ ಕರಾವಳಿ ಮತ್ತು ಸಮುದ್ರತೀರದಲ್ಲಿ ಗಂಟೆಗೆ 40–60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಆಗಸ್ಟ್ 20ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಆಗಸ್ಟ್ 21ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಈ ನಡುವೆ, ಕ್ಯಾಸಲ್ರಾಕ್, ಶೃಂಗೇರಿ, ಕಮ್ಮರಡಿ, ಜಯಪುರ, ಆಗುಂಬೆ, ಕೊಪ್ಪ, ಧರ್ಮಸ್ಥಳ, ಕಳಸ, ಸಿದ್ದಾಪುರ, ಬಾಳೆಹೊನ್ನೂರು, ಮಾಣಿ, ಕಾರ್ಕಳ, ಜೋಯ್ಡಾ, ಸುಳ್ಯ, ಪುತ್ತೂರು, ಮಂಕಿ, ಮಂಗಳೂರು, ಲೋಂಡಾ, ಕೊಟ್ಟಿಗೆಹಾರ, ಬೆಳ್ತಂಗಡಿ, ಬಂಟವಾಳ, ಸೋಮವಾರಪೇಟೆ, ಶಿರಾಲಿ, ನಾಪೋಕ್ಲು, ಕದ್ರಾ, ಭಾಗಮಂಡಲ, ಔರಾದ್, ಉಪ್ಪಿನಂಗಡಿ, ಎನ್ಆರ್ಪುರ, ಮೂಡುಬಿದಿರೆ, ಮಸ್ಕಿ, ತ್ಯಾಗರ್ತಿ, ಗೇರುಸೊಪ್ಪ, ಸೇಡಂ ಪ್ರದೇಶಗಳಲ್ಲಿ ಈಗಾಗಲೇ ಭಾರಿ ಮಳೆಯಾಗಿದೆ.

    ದಸರಾ ಆನೆಗಳಿಗೆ ದಿನಕ್ಕೆ ಎಷ್ಟು ಆಹಾರ ಬೇಕು? ಇದಕ್ಕೆ ವೆಚ್ಚ ಎಷ್ಟು ಗೊತ್ತಾ? ಸಂಪೂರ್ಣ ವಿವರ ಇಲ್ಲಿದೆ.

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading